ಗಣಿಗಾರಿಕೆ: ತುಂಗಭದ್ರಾನದಿ ಪಾತ್ರದ 7ಜಿಲ್ಲೆಗಳ ಬಂದ್ ಘೋಷಣೆ
ಶಿವಮೊಗ್ಗ : ಕುದುರೆಮುಖ ಗಣಿಗಾರಿಕೆಯನ್ನು ವಿರೋಧಿಸಿ ಡಾ. ಯು.ಆರ್. ಅನಂತ ಮೂರ್ತಿ ನೇತೃತ್ವದಲ್ಲಿ ನಡೆಯುತ್ತಿರುವ ತುಂಗಾ ಮೂಲ ಉಳಿಸಿ ಚಳವಳಿ ತೀವ್ರಗೊಂಡಿದ್ದು, ಜುಲೈ 24ರ ಮಂಗಳವಾರ ತುಂಗಭದ್ರಾ ನದಿ ಪಾತ್ರದ ಏಳು ಜಿಲ್ಲೆಗಳಲ್ಲಿ ಬಂದ್ ನಡೆಸಲು ನಿಶ್ಚಯಿಸಲಾಗಿದೆ.
ಸುಮಾರು 70 ಸಂಘಟನೆಗಳು ಈಗಾಗಲೇ ಈ ಬಂದ್ಗೆ ತಮ್ಮ ಬೆಂಬಲ ನೀಡಿದ್ದು, ಹೋರಾಟದ ಕೇಂದ್ರ ಸ್ಥಾನ ಶಿವಮೊಗ್ಗದಲ್ಲಿ ಹೋರಾಟ ಹೆಚ್ಚು ಯಶಸ್ವಿಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಆಟೋ ಮತ್ತು ಬಸ್ ಮಾಲಿಕರು ಬಂದ್ನ್ನು ಬೆಂಬಲಿಸಿ, ಪೋಸ್ಟರ್ಗಳನ್ನು ತಮ್ಮ ವಾಹನಗಳ ಮೇಲೆ ಅಂಟಿಸಿಕೊಂಡು ಚಲಿಸುತ್ತಿದ್ದಾರೆ.
ಡಾ. ಅನಂತ ಮೂರ್ತಿ ಸೋಮವಾರವೇ ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿದ್ದು, ಬಂದ್ ಯಶಸ್ವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಂಘಸಂಸ್ಥೆಗಳ ಅಧ್ಯಕ್ಷರ ಮನೆಗೆ ಸ್ವತಃ ತೆರಳಿ ಬಂದ್ಗೆ ಬೆಂಬಲ ನೀಡುವಂತೆ ಅನಂತಮೂರ್ತಿ ಕೇಳಿಕೊಂಡಿದ್ದು, ಮಂಗಳವಾರ ಶಿವಮೊಗ್ಗ ನಗರದಲ್ಲಿ ಬೃಹತ್ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications