ದೇಶಾದ್ಯಂತ ಸರ್ಕಾರಿ ನೌಕರರ ಮುಷ್ಕರ,ಅಗತ್ಯ ಸೇವೆಗಳಿಗೆ ಅಡ್ಡಿಯಿಲ್ಲ
ನವದೆಹಲಿ : ಸರ್ಕಾರದ ನೌಕರ ವಿರೋಧಿ ನೀತಿಯನ್ನು ವಿರೋಧಿಸಿ ಸುಮಾರು 2 ಕೋಟಿಗೂ ಹೆಚ್ಚು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಬುಧವಾರ(ಜುಲೈ 25) ಒಂದು ದಿನದ ಮುಷ್ಕರ ಹೂಡಿದ್ದಾರೆ.
ಸರ್ಕಾರದ ನೀತಿಯನ್ನು ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಇದೇ ಮೊದಲ ಬಾರಿಗೆ ಒಗ್ಗಟ್ಟಿನಿಂದ ಮುಷ್ಕರಕ್ಕೆ ಇಳಿದಿದ್ದಾರೆ. ಸರ್ಕಾರದ ಖಾಸಗೀಕರಣದಿಂದ ಹುದ್ದೆಗಳ ಸಂಖ್ಯೆಯಲ್ಲಿ ಕಡಿತ ಉಂಟಾಗುತ್ತದೆ ಎನ್ನುವುದು ಸರ್ಕಾರದ ವಿರುದ್ಧ ಮುಷ್ಕರ ನಿರತರ ಆರೋಪ.
ಪಿಯುಸಿ ಹಾಗೂ ಪದವಿ ತರಗತಿಗಳ ಬೋಧಕ ಸಿಬ್ಬಂದಿ ಕೂಡ ದೇಶಾದ್ಯಂತ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ನೌಕರರ ಮುಷ್ಕರದಿಂದ ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆ ಉಂಟಾಗಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಈ ನಡುವೆ ಪ್ರಥಮ ಹಾಗೂ ದ್ವಿತೀಯ ದರ್ಜೆ ಗೆಜೆಟೆಡ್ ಅಧಿಕಾರಿಗಳು ಸೇರಿದಂತೆ ಸುಮಾರು 70 ಸಾವಿರ ನೌಕರರು ಮಹಾರಾಷ್ಟ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications