ರಾಜ್ಯದ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡ
ನವದೆಹಲಿ : ಮುಂಗಾರು ಮಳೆ ವೈಫಲ್ಯದಿಂದ ಕರ್ನಾಟಕ ರಾಜ್ಯ ಬರ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಅರ್ಪಿಸಲಾಗಿದೆ. ಈ ಸಂಬಂಧ ಭಾರತೀಯ ಜನತಾಪಕ್ಷದ ರಾಜ್ಯ ಘಟಕದ ನಿಯೋಗ ಗುರುವಾರ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಕರ್ನಾಟಕದ ಸಂಸತ್ ಸದಸ್ಯರು, ಹಿರಿಯ ಮುಖಂಡರನ್ನೊಳಗೊಂಡ ನಿಯೋಗವು ಪ್ರಧಾನಿ ಅವರಿಗೆ ಕರ್ನಾಟಕದ ಬರ ಪರಿಸ್ಥಿತಿಯನ್ನು ವಿವರಿಸಿತು. ನಿಯೋಗದ ಮನವಿಯನ್ನು ಆಲಿಸಿದ ಪ್ರಧಾನಿ ಅವರು, ಕಾಳು ಯೋಜನೆಗೆ ನೆರವು ನೀಡುವ ಭರವಸೆಯನ್ನು ನೀಡಿದರು ಎಂದು ರಾಜ್ಯ ಬಿ.ಜೆ.ಪಿ. ಘಟಕದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ ತಿಳಿಸಿದ್ದಾರೆ.
ಪ್ರಾಣಿಗಳಿಗೆ ಮೇವು ಒದಗಿಸಲು ಸಹಕರಿಸುವುದಾಗಿಯೂ ಪ್ರಧಾನಿ ಅವರು ಭರವಸೆ ನೀಡಿದ್ದಾರೆ. ರಾಜ್ಯದ ಇನ್ನಿತರ ಬೇಡಿಕೆಗಳ ಸಂಬಂಧ ಹಾಗೂ ಬರ ಪರಿಸ್ಥಿತಿಯಿಂದಾಗಿರುವ ಹಾನಿಯ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ತಂಡವನ್ನು ಕಳುಹಿಸಿ, ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದರು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಅನಂತ್ಕುಮಾರ್ ಹಾಜರಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications