ಕಾರ್ಗಿಲ್ ಯೋಧರ ಸ್ಮರಣಾರ್ಥ ರಾಷ್ಟ್ರಾದ್ಯಂತ ವಿಜಯ್‌ದಿವಸ್
ನವದೆಹಲಿ : ದೇಶವನ್ನು ರಕ್ಷಿಸಲು ಎರಡು ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣವನ್ನೇ ತೆತ್ತ ವೀರ ಯೋಧರಿಗೆ ಗುರುವಾರ ರಾಷ್ಟ್ರಾದ್ಯಂತ ಗೌರವ ಅರ್ಪಿಸಲಾಯಿತು.
ಇಲ್ಲಿನ ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಗುರುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಕೃಷ್ಣಕಾಂತ್, ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ರಕ್ಷಣಾ ಸಚಿವ ಜಸ್ವಂತ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಕಾರ್ಗಿಲ್ ಕಾರ್ಯಾಚರಣೆಯಲ್ಲಿ ಅಪ್ರತಿಮ ಶೌರ್ಯ , ಸಾಹಸ ಮೆರೆದು ದೇಶಕ್ಕಾಗಿ ಬಲಿದಾನಗೈದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛಗಳನ್ನರ್ಪಿಸಿ ತಮ್ಮ ಶ್ರದ್ಧಾಂಜಲಿ ಸಲ್ಲಿಸಿದರು.
ದೇಶ ಅತಿಕ್ರಮಣಕಾರರ ಧಾಳಿಯಿಂದ ವಿಮುಕ್ತವಾಗಿ ಎರಡು ವರ್ಷಗಳು ಕಳೆದ ಸಂದರ್ಭದಲ್ಲಿ ಗುರುವಾರ ರಾಷ್ಟ್ರಾದ್ಯಂತ ವಿಜಯ್ ದಿವಸ್ ಆಚರಿಸಲಾಯಿತು. ಅನಾರೋಗ್ಯದ ಕಾರಣ ರಾಷ್ಟ್ರಪತಿ ಕೆ.ಆರ್. ನಾರಾಯಣ್ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ.
ಸೇನಾ ಪಡೆಗಳ ವರಿಷ್ಠರು ಅಗಲಿದ ಯೋಧರಿಗೆ ತಮ್ಮ ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಸಚಿವ ಸಂಪುಟದ ಕೆಲವು ಸಚಿವರುಗಳು, ಹಿರಿಯ ಅಧಿಕಾರಿಗಳು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರು ವರದಿ : ಬೆಂಗಳೂರಿನಲ್ಲಿರುವ ವಿವಿಧ ಸೇನಾ ಕೇಂದ್ರಗಳಲ್ಲಿ ಕೂಡ ಗುರುವಾರ ವಿಜಯೋತ್ಸವ ದಿನ ಆಚರಿಸಲಾಯಿತು. ವೀರಯೋಧರ ಸ್ಮಾರಕ್ಕೆ ಪುಷ್ಪಗುಚ್ಛ ಅರ್ಪಿಸಿ ಅಗಲಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎ.ಎಸ್.ಸಿ. ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸರ್ವಧರ್ಮ ಪ್ರಾರ್ಥನೆಯೂ ನಡೆಯಿತು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications