ಜ್ಯೋತಿಷ್ಯ ಕೋರ್ಸಿನ ಪ್ರಸ್ತಾವನೆ ವಿವಿ ಮುಂದಿಲ್ಲ -ಉಪಕುಲಪತಿ
ಮಂಗಳೂರು : ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಜ್ಯೋತಿಷ್ಯ ಶಾಸ್ತ್ರ ಮತ್ತು ಪೌರೋಹಿತ್ಯದ ಕೋರ್ಸುಗಳನ್ನು ಆರಂಭಿಸುವ ಯಾವುದೇ ಪ್ರಸ್ತಾವನೆ ವಿಶ್ವವಿದ್ಯಾಲಯದ ಮುಂದಿಲ್ಲ ಎಂಬುದಾಗಿ ಮಂಗಳೂರು ವಿಶ್ವ ವಿದ್ಯಾಲಯದ ಉಪಕುಲಪತಿ ಎಸ್. ಗೋಪಾಲ್ ಹೇಳಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜ್ಯೋತಿಷ್ಯ ಮತ್ತು ಪೌರೋಹಿತ್ಯದ ಕೋರ್ಸುಗಳನ್ನು ಆರಂಭಿಸಲಾಗುವುದು ಎಂದು ಸಮಾರಂಭವೊಂದರ ವೇದಿಕೆಯಲ್ಲಿ ಮೈಕ್ ಹಿಡಿದುಕೊಂಡು ಘೋಷಿಸಿದ್ದ ಎಸ್. ಗೋಪಾಲ್ ಅವರು ಸಾಕಷ್ಟು ವಿರೋಧ, ಪ್ರತಿಭಟನೆಗಳನ್ನು ಎದುರಿಸಿದ ಬಳಿಕ ಈಗ ಅಂತಹ ಯಾವುದೇ ಕೋರ್ಸುಗಳನ್ನು ಆರಂಭಿಸುವ ಪ್ರಸ್ತಾವನೆ ವಿಶ್ವ ವಿದ್ಯಾಲಯದ ಮುಂದಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಎಸ್. ಎಫ್. ಐ, ಡಿ.ವೈ.ಎಫ್.ಐ ಮತ್ತಿತರ ವಿದ್ಯಾರ್ಥಿ ಸಂಘಟನೆಗಳು ವಿವಿಯಲ್ಲಿ ಜ್ಯೋತಿಷ್ಯ ಮತ್ತು ಪೌರೋಹಿತ್ಯದ ಕೋರ್ಸುಗಳ ಆರಂಭವನ್ನು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. ಕೇಂದ್ರ ಸರಕಾರದ ಸಂಸ್ಕೃತಿ ಖಾತೆಯ ಪ್ರೀತ್ಯರ್ಥ ಉಪಕುಲಪತಿಗಳು ಕೆಲಸ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications