ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕಕ್ಕೆ 120 ಪ್ರೌಢ ಶಾಲೆಗಳ ಮಂಜೂರು

By Staff
|
Google Oneindia Kannada News

ಬೆಂಗಳೂರು : ಶೈಕ್ಷಣಿಕವಾಗಿ ಹಿಂದುಳಿದಿರುವ ಉತ್ತರ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಅಸಮತೋಲನ ನಿವಾರಿಸಲು ಹೊಸದಾಗಿ 120 ಪ್ರೌಢಶಾಲೆಗಳನ್ನು ಮಂಜೂರು ಮಾಡಲಾಗಿದೆ. ನಬಾರ್ಡ್‌ ಆರ್ಥಿಕ ನೆರವಿನಲ್ಲಿ ಪ್ರತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ 20 ಲಕ್ಷ ರುಪಾಯಿ ನೀಡಲಾಗುವುದು ಎಂದು ಸಚಿವ ವಿಶ್ವನಾಥ್‌ ತಿಳಿಸಿದ್ದಾರೆ.

ವಿಧಾನ ಮಂಡಳದ ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಪಕ್ಷದ ಉಪನಾಯಕ ಡಿ.ವಿ. ಸದಾನಂದ ಗೌಡ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವನಾಥ್‌ ಅವರು, ಶೈಕ್ಷಣಿಕ ಅಸಮತೋಲನ ನಿವಾರಣೆಗಾಗಿ ಈಶಾನ್ಯ ವಲಯದ ಪ್ರದೇಶಗಳಿಗೆ 79 ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದರು. ಅವುಗಳಲ್ಲಿ 11 ಜಿಲೆಗಳಲ್ಲಿ ಹೊಸ ಪ್ರೌಢ ಶಾಲೆಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ವಿವರಿಸಿದರು.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ. ಡಿ.ಎಂ. ನಂಜುಂಡಪ್ಪ ಅವರು ನೀಡಿರುವ ಮಧ್ಯಂತರ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭಕ್ಕೆ ಆದ್ಯತೆ ನೀಡಲಾಗಿದೆ ಎಂದ ಸಚಿವರು, ರಾಜ್ಯದ ಪ್ರೌಢ ಶಾಲೆಗಳಲ್ಲಿ ಗಣಿತ, ಹಿಂದಿ, ಇಂಗ್ಲಿಷ್‌, ವಿಜ್ಞಾನ ವಿಷಯಗಳ ಶಿಕ್ಷಕರ ನೇಮಕ್ಕೆ ಇನ್ನು ಹದಿನೈದು ದಿನಗಳಲ್ಲಿ ಆದೇಶ ನೀಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X