ಹೆಣ್ಣುಶಿಶು ಮಾರಾಟ : ಆರೋಪಿ ಸಾವಿತ್ರಿನ್ಯಾಯಾಲಯಕ್ಕೆ ಶರಣು
ಹೈದರಾಬಾದ್ : ಹೆಣ್ಣು ಮಕ್ಕಳ ದತ್ತು - ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಆಂಧ್ರಪ್ರದೇಶ ಪೊಲೀಸರಿಗೆ ಬೇಕಾಗಿದ್ದ, ಪ್ರಮುಖ ಆರೋಪಿ ಸಾವಿತ್ರಮ್ಮ ಕೊನೆಗೂ ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಶರಣಾಗಿದ್ದಾಳೆ.
ಕಳೆದ ಏಪ್ರಿಲ್ ತಿಂಗಳಿನಿಂದಲೂ ಪೊಲೀಸರಿಗೆ ಸಿಗದೆ ತಲೆತಪ್ಪಿಸಿಕೊಂಡಿದ್ದ ಈಕೆ, ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ ಶರಣಾಗಿರುವುದು ಪೊಲೀಸರಿಗೆ ಆಶ್ಚರ್ಯ ತಂದಿದೆ. ಆರೋಪಿಯನ್ನು ಆಗಸ್ಟ್ 18ರವರೆಗೆ ನ್ಯಾಯಾಂಗ ಬಂಧನದಲ್ಲಿಡುವಂತೆ ನ್ಯಾಯಾಲಯ ಆದೇಶಿಸಿದೆ.
ಬುರ್ಕಾ ಧರಿಸಿ, ಯಾರಿಗೂ ತನ್ನ ಗುರುತು ತಿಳಿಯದಂತೆ, ವಕೀಲರೊಂದಿಗೆ ಗುರುವಾರ ಇಲ್ಲಿನ ನಾಂಪಲ್ಲಿ ಅಪರಾಧ ನ್ಯಾಯಾಲಯಕ್ಕೆ ಆಗಮಿಸಿದ ಸಾವಿತ್ರಿ ಅಲಿಯಾಸ್ ಸಾವಿತ್ರಿಬಾಯಿ ಅಲಿಯಾಸ್ ಸ್ಯಾಮ್ಸನ್ ಅಲಿಯಾಸ್ ಸಾವಿತ್ರಮ್ಮ ನ್ಯಾಯಾಲಯಕ್ಕೆ ಶರಣಾಗುವುದಾಗಿ ಅರಿಕೆ ಮಾಡಿಕೊಂಡಳು.
ಈಕೆಯನ್ನು ಗುರುತಿಸುವಂತೆ ನ್ಯಾಯಮೂರ್ತಿ ಆನಂದರಾವ್ ಅವರು, ಸಿ.ಐ.ಡಿ. ವಿಭಾಗದ ಪೊಲೀಸರನ್ನು ಕರೆಸಿದಾಗಲೇ ಪೊಲೀಸರಿಗೆ ಈ ವಿಷಯ ತಿಳಿದದ್ದು. ದತ್ತು ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.
ಗ್ರಾಮಗಳ ಸುಧಾರಣೆ: (ಬೆಂಗಳೂರು ವರದಿ) ಹೆಣ್ಣು ಶಿಶುಗಳ ಮಾರಾಟ ಆಗುತ್ತಿದ್ದ ಗುಲ್ಬರ್ಗಾದ ಚಿಂಚೋಳಿ ತಾಲೂಕಿನ ಕೊಂಚಾವರಂ ಹೋಬಳಿಯ ಗ್ರಾಮ ಹಾಗೂ ತಾಂಡಾಗಳಲ್ಲಿ ಆಶ್ರಮ, ಶಾಲೆ, ಕಾಲೇಜು, ವಸತಿ ನಿಲಯ ಹಾಗೂ ಮನೆ ನಿರ್ಮಾಣ ಮಾಡಿ, ಗಂಗಾ ಕಲ್ಯಾಣ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮಗಳ ಸುಧಾರಣೆ ಮಾಡಲಾಗುವುದು ಎಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕೊಂಚಾವರಂ ಹೋಬಳಿಯ 26 ಗ್ರಾಮಗಳು ಹಾಗೂ ತಾಂಡಾಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಹೆಚ್ಚುವರಿಯಾಗಿ 20 ಲಕ್ಷ ರುಪಾಯಿ, ಸಮಗ್ರ ಬಂಜರು ಭೂಮಿ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ವಿಧಾನ ಸಭೆಯಲ್ಲಿ ಗುರುವಾರ ತಿಳಿಸಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications