‘ಎಡಿಬಿ’ಯ 1057 ಕೋಟಿ ರು.ನೆರವಿನಲ್ಲಿ ಕರಾವಳಿ ಪಟ್ಟಣಗಳ ಅಭಿವೃದ್ಧಿ
ಬೆಂಗಳೂರು : ರಾಜ್ಯದ ಮೂರು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗಳ ಸಮಗ್ರ ಅಭಿವೃದ್ಧಿಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್(ಎಡಿಬಿ)ನ 1057 ಕೋಟಿ ರುಪಾಯಿ ನೆರವಿನ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 10 ಪಟ್ಟಣಗಳು ಈ ಯೋಜನೆಯ ಫಲಾನುಭವಿಗಳಾಗಿದ್ದು , 306.27 ಕೋಟಿ ರುಪಾಯಿಗಳನ್ನು ಮಂಗಳೂರು ನಗರದ ಅಭಿವೃದ್ಧಿಗೆ ಬಳಸಲಾಗುವುದು. ಯೋಜನೆಯನ್ನು ಅನುಷ್ಠಾನಗೊಳಿಸುವ ಪ್ರಾಥಮಿಕ ಕಾರ್ಯಗಳು ಈಗಾಗಲೇ ಪ್ರಗತಿಯಲ್ಲಿವೆ ಎಂದು ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತಿದ್ದ ಚಂದ್ರೇಗೌಡ ತಿಳಿಸಿದರು. ಅವರು ಕಾಂಗ್ರೆಸ್ನ ಶಾಸಕ ವಿಜಯ್ಕುಮಾರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದರು.
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೀಡುವ ನೆರವಿನಲ್ಲಿ ಪ್ರತಿಶತ 58 ಅನುದಾನದ ರೂಪದಲ್ಲಿದ್ದು , ಉಳಿದ ಹಣ ಸಾಧಾರಣ ಸಾಲದ ರೂಪದಲ್ಲಿರುತ್ತದೆ ಎಂದು ಚಂದ್ರೇಗೌಡ ಹೇಳಿದರು.
(ಯುಎನ್ಐ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications