ಬೆಂಗಳೂರು ಬಳಿ ಹಾಡು ಹಗಲೇ ವಿಜ್ಞಾನಿ ಕೊಲೆ, ಮನೆ ದರೋಡೆ
ಬೆಂಗಳೂರು : ಮಂಡ್ಯದ ಹೊರವಲಯದ 7 ಮನೆಗಳಲ್ಲಿ ಸರಣಿ ಡಕಾಯಿತಿ ನಡೆದ 24 ಗಂಟೆಗಳೊಳಗೇ ಬೆಂಗಳೂರು ಹೊರವಲಯದ ಮನೆಯಲ್ಲಿ ಹಾಡುಹಗಲೇ ನಿವೃತ್ತ ವಿಜ್ಞಾನಿಯಾಬ್ಬರನ್ನು ಹತ್ಯೆಗೈದು, 20 ಸಾವಿರ ರುಪಾಯಿ ನಗದು, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಲಾಗಿದೆ.
ಕೃಷ್ಣರಾಜ ಪುರದ ಸುಭಾಷ್ ಬಡಾವಣೆಯಲ್ಲಿ ವಾಸವಾಗಿದ್ದ ಚೆನ್ನೈನ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ರಿಸರ್ಚ್ ಇನ್ಸಿಸ್ಟಿಟ್ಯೂಟ್‌ನಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದ ಎನ್. ಚಂದ್ರಶೇಖರ್ (67) ಮತ್ತು ಅವರ ಪತ್ನಿ ಪದ್ಮಜಾ (60) ಅವರುಗಳ ಮೇಲೆ ನಾಲ್ಕು ಜನ ದರೋಡೆಕೋರರ ತಂಡ ಗುರುವಾರ ಮಧ್ಯಾಹ್ನ ಹಲ್ಲೆ ನಡೆಸಿ, ದರೋಡೆ ಮಾಡಿದೆ.
ದರೋಡೆಕೋರರ ತಂಡ ವಿಜ್ಞಾನಿ ಚಂದ್ರಶೇಖರ್‌ರ ಕುತ್ತಿಗೆ ಕೊಯ್ದು ಹತ್ಯೆ ಮಾಡಿದೆ. ಹಲ್ಲೆಯಲ್ಲಿ ತಲೆಗೆ ತೀವ್ರ ಸ್ವರೂಪದ ಗಾಯವಾಗಿರುವ ಅವರ ಪತ್ನಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಈ ಘಟನೆ ಗುರುವಾರ ಮಧ್ಯಾಹ್ನ ಸುಮಾರು 1.30ರಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷ್ಣರಾಜಪುರ ಪೊಲೀಸ್ ಠಾಣೆಗೆ ಕೇವಲ 1.5 ಕಿ.ಮೀಟರ್ ದೂರದಲ್ಲಿರುವ ಈ ಪ್ರದೇಶ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದು, ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಿವೃತ್ತಿಯ ಬಳಿಕ ನಿವೃತ್ತರ ಸ್ವರ್ಗ ಎಂದೇ ಖ್ಯಾತವಾದ ಬೆಂಗಳೂರಿಗೆ ಬಂದು ನೆಮ್ಮದಿಯ ಜೀವನ ನಡೆಸುವ ಆಶಯದಿಂದ ಚಂದ್ರಶೇಖರ್ ಈ ಬಡಾವಣೆಯಲ್ಲಿ ನೆಲೆಸಿದ್ದರು.
ಗುರುವಾರ ಬ್ಯಾಂಕ್‌ಗೆ ಹೋಗಿದ್ದ ಚಂದ್ರಶೇಖರ್ ಮನೆಗೆ ಬಂದಾಗ ದರೋಡೆಕೋರರ ತಂಡ ಅವರ ಮೇಲೆ ಹಲ್ಲೆ ನಡೆಸಿ, ಕೊತ್ತಿಗೆ ಕತ್ತರಿಸಿತು. ಗೃಹಪ್ರವೇಶಕ್ಕೆ ಹೋಗಿದ್ದ ಅವರ ಪತ್ನಿ ಅದೇ ವೇಳೆಗೆ ಮನೆಗೆ ಮರಳಿದಾಗ ತಂಡ ಅವರ ಮೇಲೂ ಹಲ್ಲೆ ನಡೆಸಿ, ಅವರ ಮೈಮೇಲಿದ್ದ ಒಡವೆ, ಮನೆಯಲ್ಲಿದ್ದ ನಗದು ಹಣ ದೋಚಿ ಪರಾರಿಯಾಯಿತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಗಾರ್ಡನ್ ಸಿಟಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಚಂದ್ರಶೇಖರ್ ಅವರ ಪುತ್ರ ಕೃಷ್ಣಮೂರ್ತಿ ಮಧ್ನಾಹ್ನ ಮನೆಗೆ ಮರಳಿದಾಗ ಈ ಅನಾಹುತ ಸಂಭವಿಸಿರುವುದು ಗೊತ್ತಾಯಿತು. ಕೃಷ್ಣ ಮೂರ್ತಿ ಅವರು ನೀಡಿರುವ ದೂರಿನ ಮೇರೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ದರೋಡೆಕೋರರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು. ಶ್ವಾನದಳ, ಬೆರಳಚ್ಚು ತಜ್ಞರು ದುಷ್ಕರ್ಮಿಗಳ ಪತ್ತೆಗೆ ನೆರವಾಗುತ್ತಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications