ಸಾಫ್ಟ್‌ವೇರ್ ಕ್ಷೇತ್ರಕ್ಕೆಬಂಡವಾಳ ಹರಿಕೆ ಮುಂದುವರೆದಿದೆ- ವಿವೇಕ್
ಮೈಸೂರು : ಅಮೆರಿಕ ಆರ್ಥಿಕ ಹಿನ್ನಡೆಯ ಹೊರತಾಗಿಯೂ ಸಾಫ್ಟ್‌ವೇರ್ ಕ್ಷೇತ್ರಕ್ಕೆ ಬಂಡವಾಳ ಆಕರ್ಷಿಸುವಲ್ಲಿ ರಾಜ್ಯ ಹಿಂದೆ ಬಿದ್ದಿಲ್ಲ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ಹೇಳಿದ್ದಾರೆ.
ಅವರು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ (ಸಿಐಎಸ್‌ಟಿ) ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಪ್ರತಿ ವಾರವೂ ಒಂದಲ್ಲ ಒಂದು ಹೊಸ ಕಂಪೆನಿ ನೇರ ಬಂಡವಾಳವನ್ನು ಹೂಡುವ ಪ್ರಸ್ತಾವನೆಯಾಂದಿಗೆ ರಾಜ್ಯಕ್ಕೆ ಭೇಟಿನೀಡುತ್ತಿದೆ ಎಂದ ವಿವೇಕ್, ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ನ ಮೈಸೂರು ಘಟಕ ಈ ವರ್ಷ 90 ಕೋಟಿ ರೂ. ಮೌಲ್ಯದ ಸಾಫ್ಟ್‌ವೇರ್ ರಫ್ತು ಮಾಡುವ ಗುರಿ ಇಟ್ಟುಕೊಂಡಿದೆ ಎಂದರು.
ಇತ್ತೀಚೆಗೆ ಖಾಸಗಿ ಅಂತರರಾಷ್ಟ್ರೀಯ ಸಲಹಾ ಕಂಪೆನಿಯಾಂದಿಗೆ ನಾಸ್‌ಕಾಮ್ ನಡೆಸಿದ ಸಮೀಕ್ಷೆಯನ್ನು ಉಲ್ಲೇಖಿಸುತ್ತಾ , ಜಾಗತಿಕ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಭಾರತ ಬ್ರಾಂಡ್ ಲೀಡರ್ ಆಗಿದೆ. ಆರ್ಥಿಕ ಹಿನ್ನಡೆಯನ್ನು ಲೆಕ್ಕಿಸದೆಯೇ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಮಿಲಿಯಗಟ್ಟಲೆ ಉದ್ಯೋಗವಕಾಶ ಸೃಷ್ಟಿಸುವುದಾಗಿ ಭರವಸೆ ನೀಡಿದೆ. ಕಾಲ್ ಸೆಂಟರ್ ಆಪರೇಷನ್ಸ್‌ಗೆ ಭಾರತದಲ್ಲಿ ಬೇಡಿಕೆ ಇದ್ದು 150 ಮಿಲಿಯ ಪದವೀಧರರನ್ನು ಅದು ಬಳಸಿಕೊಳ್ಳಲಿದೆ. ಮನೆಯಲ್ಲಿಯೇ ಉದ್ಯೋಗ ಎಂಬ ತತ್ವದಡಿ ಪದವೀಧರ ಗೃಹಿಣಿಯರೂ ಉದ್ಯೋಗಸ್ಥರಾಗುವ ಕಾಲ ದೂರವಿಲ್ಲ ಎಂದರು.
ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರ ಸಾಧನೆಯನ್ನು ಉದಾಹರಿಸುತಾ ್ತ , ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3,500 ಲೈಬ್ರರಿಗಳನ್ನು ಸ್ಥಾಪಿಸುವ ಮೂಲಕ ಆಕೆ ಐಟಿ ಜ್ಞಾನವನ್ನು ಬಿತ್ತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ವಿವೇಕ್ ಶ್ಲಾಘಿಸಿದರು.
ಸಿಐಎಸ್‌ಟಿಯನ್ನು ಉದ್ಘಾಟಿಸಿದ ಸುಧಾಮೂರ್ತಿ ಕಡಿಮೆ ವೆಚ್ಚದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ತಂತ್ರಜ್ಞಾನವನ್ನು ತಲುಪಿಸುವ ಅಗತ್ಯವನ್ನು ಒತ್ತಿ ಹೇಳಿದರು. ಸಿಐಎಸ್‌ಟಿಯು ಗೃಹಿಣಿಯರಿಗೂ ಸೇರಿದಂತೆ ಏಳು ಡಿಪ್ಲೊಮಾ ಮತ್ತು ಮೂರು ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಇದೇ ಶೈಕ್ಷಣಿಕ ವರ್ಷದಿಂದ ಆರಂಭಿಸಲಿದೆ ಎಂದು ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ. ಎಸ್.ಎನ್. ಹೆಗ್ಡೆ ತಿಳಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications