ಕೊಲ್ಲೂರು ಮೂಕಾಂಬಿಕೆಗೆ ಜನವರಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಅಷ್ಟಬಂಧ ಮಹಾ ಬ್ರಹ್ಮಕಲಶೋತ್ಸವವನ್ನು ಬರುವ ಜನವರಿಯಲ್ಲಿ ನಡೆಸಲಾಗುವುದು ಎಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಡೆಯುವ ಈ ಅಪರೂಪದ ಕಲಶೋತ್ಸವಕ್ಕೆ ಅಸಂಖ್ಯ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ದಶಕದ ಬಳಿಕ ನಡೆವ ಈ ಉತ್ಸವಕ್ಕೆ ತಯಾರಿ ಈಗಾಗಲೇ ಶುರುವಾಗಿದೆ. ದೇವಸ್ಥಾನದ ಅಕ್ಕ ಪಕ್ಕ ವಿಶಾಲವಾದ ಜಾಗ ಇರಬೇಕೆಂಬ ದೃಷ್ಟಿಯಿಂದ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗುವಂತೆ 2.97 ಹೆಕ್ಟೇರ್ ಪ್ರದೇಶವನ್ನು ಖರೀದಿಸಲಾಗಿದೆ. ಈ ಜಾಗದಲ್ಲಿ ವಿಶಾಲವಾದ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಹಾಗೂ ಪ್ರವಾಸೀ ಮಂದಿರವನ್ನು ನಿರ್ಮಿಸಲಾಗುತ್ತಿದೆ.
ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಲಾಗುತ್ತಿರುವ ಕಮಾನು ದ್ವಾರ ಈ ವರ್ಷಾಂತ್ಯದೊಳಗೆ ರೆಡಿಯಾಗಲಿದೆ. ದೇವಸ್ಥಾನದ ಕಳೆದ ವರ್ಷದ ಆದಾಯ 9 ಕೋಟಿ ರೂಪಾಯಿಗಳಾಗಿದ್ದು, ಏಳು ಕೋಟಿ ರೂಪಾಯಿಗಳನ್ನು ಬ್ಯಾಂಕ್ನಲ್ಲಿ ಠೇವಣಿ ಇಡಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications