ಪಿಲಿಕುಳ ನಿಸರ್ಗಧಾಮದಲ್ಲಿ ಔಷಧೀಯ ಗಿಡ ನೆಡುವ ಯೋಜನೆ
ವಿಟ್ಲ : ಮಂಗಳೂರು ಸಮೀಪದ ವಾಮಂಜೂರಿನ ಪಿಲಿಕುಳ ನಿಸರ್ಗಧಾಮದಲ್ಲಿ 60 ಸಾವಿರ ಔಷಧೀಯ ಗಿಡಗಳನ್ನು ನೆಡುವ ಯೋಜನೆಯನ್ನು ಮಂಗಳೂರು ವಿಶ್ವ ವಿದ್ಯಾಲಯದ ಆನ್ವಯಿಕ ಸಸ್ಯಶಾಸ್ತ್ರ ವಿಭಾಗವು ಕೈಗೆತ್ತಿಕೊಂಡಿದೆ.
ಇಂಡೋ-ನಾರ್ವೆ ಪರಿಸರ ಕಾರ್ಯಕ್ರಮದಡಿಯಲ್ಲಿ 30 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ನಿಸರ್ಗಧಾಮದ 80 ಎಕರೆ ಜಾಗದಲ್ಲಿ ಔಷಧೀಯ ಗಿಡ ನೆಡುವ ಈ ಯೋಜನೆಯ ನೇತೃತ್ವವನ್ನು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕಾವೇರಪ್ಪ ಅವರು ವಹಿಸಲಿದ್ದಾರೆ.
ಈ ವಿಷಯವನ್ನು ಸಸ್ಯಶಾಸ್ತ್ರ ವಿಭಾಗದ ಯೋಜನಾಧಿಕಾರಿ ಡಾ. ರಾಮಭಟ್ ಅವರು ವಿಠ್ಠಲ ಪದವಿಪೂರ್ವ ಕಾಲೇಜು ಮತ್ತು ಬಾಲಿಕಾ ಪ್ರೌಢಶಾಲೆಯ ಪರಿಸರ ಸಂಘದ ಕಾರ್ಯಕ್ರಮದಲ್ಲಿ ಶುಕ್ರವಾರ ತಿಳಿಸಿದರು.
ಕೋಣಾಜೆಯ ನಾಲ್ಕು ಎಕರೆ ಪ್ರದೇಶದಲ್ಲಿ ವಿಶ್ವ ವಿದ್ಯಾಲಯವು ಸಸ್ಯಧಾಮವೊಂದನ್ನು ಈಗಾಗಲೇ ನಿರ್ವಹಿಸುತ್ತಿದ್ದು, 250 ವಂಶಾವಳಿಯ ಔಷಧೀಯ ಗಿಡಗಳ ನರ್ಸರಿಯನ್ನೂ ವಿವಿ ನಡೆಸುತ್ತಿದೆ. ವಿವಿಯ ಸಸ್ಯ ಶಾಸ್ತ್ರವಿಭಾಗ ಕೈಗಾ ಅಣುಸ್ಥಾವರ ಮತ್ತು ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆ ನಿವೇಶನದಲ್ಲಿಯೂ ಈಗಾಗಲೇ ಉಪಯುಕ್ತ ಗಿಡಗಳನ್ನು ನೆಡಲಾಗಿದೆ ಎಂದು ರಾಮಭಟ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications