ಗುಬ್ಬಿ: ತೋಟದ ಮನೆಯಲ್ಲಿ ಡಕಾಯಿತಿ- 3.5 ಲಕ್ಷ ರು. ದರೋಡೆ
ತುಮಕೂರು : ಮನೆಯ ಮಾಲಿಕರ ಪುತ್ರ ಹಾಗೂ ಕಾವಲುಗಾರನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ 7-8 ಜನರಿದ್ದ ಡಕಾಯಿತರ ತಂಡ 60 ಸಾವಿರ ರುಪಾಯಿ ನಗದೂ ಸೇರಿದಂತೆ, 3.5 ಲಕ್ಷ ರುಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ದೋಚಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ತುಮಕೂರು ಜಿಲ್ಲೆಯ ಗುಬ್ಬಿಯ ಬಳಿ ಸಂಭವಿಸಿದೆ.
ತುಮಕೂರು - ಹೊನ್ನಾವರ ಹೆದ್ದಾರಿಯ ಪಕ್ಕದಲ್ಲೇ ಇರುವ ಪತ್ರೆಮತಿಗಟ್ಟ ಗ್ರಾಮದ ಬಸವರಾಜ ಪತ್ರೆ ಎಂಬುವವರ ತೋಟದ ಮನೆಗೆ ನುಗ್ಗಿದ ಡಕಾಯಿತರ ತಂಡ, ಕಾವಲುಗಾರ ಹಾಗೂ ಮನೆಯ ಮಾಲಿಕರ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.
ರಾತ್ರಿ 1.50ರ ಸುಮಾರಿನಲ್ಲಿ ಮನೆಯ ಕಾವಲುಗಾರ ಕೃಷ್ಣಪ್ಪನ ಮೇಲೆ ಮೊದಲು ಮಚ್ಚು ಹಾಗೂ ದೊಡ್ಡೆಯಿಂದ ಹಲ್ಲೆ ನಡೆಸಿದ ಡಕಾಯಿತರು, ಬಾಗಿಲು ಮುರಿದು ಒಳಹೊಕ್ಕರು. ಸುಮಾರು ಅರ್ಧ, ಮುಕ್ಕಾಲು ಗಂಟೆ ಮನೆಯಲ್ಲಿದ್ದ ಸಾಮಾನುಗಳೆಲ್ಲವನ್ನೂ ಜಾಲಾಡಿ, ಬೆಲೆಬಾಳುವ ವಸ್ತುಗಳನ್ನು ದೋಚಿದರು. ಈ ಗಲಾಟೆ ಕೇಳಿ ಹೊರಬಂದ ಬಸವರಾಜ್ ಅವರ ಪುತ್ರ ದಿನೇಶ್‌ನ ಮೇಲೂ ಡಕಾಯಿತರು ಹಲ್ಲೆ ನಡೆಸಿದರು.
ಮನೆಯವರ ಕೈಕಾಲು ಕಟ್ಟಿ, ಬೀರು ಬಾಗಿಲು ಮುರಿದು ರೇಷ್ಮೆ ಸೀರೆಗಳು, ಒಡವೆ ವಸ್ತುಗಳೆಲ್ಲವನ್ನೂ ದೋಚಿದರು. ಹಿರಿಯ ಪೊಲೀಸ್ ಅಧಿಕಾರಿ ಆರ್. ಹಿತೇಂದ್ರ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುಬ್ಬಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಇನ್‌ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications