ರಾಜಸ್ಥಾನದ ‘ವಾಟರ್ ಮ್ಯಾನ್’ ರಾಜೇಂದ್ರ ಸಿಂಗ್ಗೆಮ್ಯಾಗ್ಸೆಸೆ ಪ್ರಶಸ್ತಿ
ಮನಿಲಾ : ವಾಟರ್ ಮ್ಯಾನ್ ಎಂದೇ ಹೆಸರಾದ ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್ ಪ್ರಸಕ್ತ ಸಾಲಿನ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೋಮವಾರ ಪ್ರಕಟವಾದ ಈ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯಲ್ಲಿರುವ ಭಾರತದ ಏಕೈಕ ವ್ಯಕ್ತಿ ಇವರು.
ಆಳ್ವಾರ್ನ ಜಲ ನಿರ್ವಹಣಾ ಕ್ಷೇತ್ರದಲ್ಲಿನ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ರಾಜೇಂದ್ರ ಸಿಂಗ್ ಪಾತ್ರ ಹಿರಿದಾದದ್ದು. ಈ ಕಾರಣಕ್ಕಾಗೇ ಅವರಿಗೆ ಜನ ನಾಯಕತ್ವಕ್ಕಾಗಿ ಮ್ಯಾಗ್ಸೆಸೆ ಪ್ರಶಸ್ತಿ ಸಂದಿದೆ. ಜಪಾನಿನ ಒಬ್ಬರು, ಚೀನಾದ ಇಬ್ಬರು, ಶ್ರೀಲಂಕಾ, ಇಂಡೋನೇಷ್ಯಾ ಹಾಗೂ ಕಾಂಬೋಡಿಯಾದಿಂದ ತಲಾ ಒಬ್ಬೊಬ್ಬರು ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಪಾನಿನ ಇಕುವೋ ಹಿರಾಯಾಮ ಅವರಿಗೆ ಯುನೆಸ್ಕೋ ರಾಯಭಾರಿಯಾಗಿ ಸಲ್ಲಿಸಿರುವ ಸೇವೆಗೆ ಶಾಂತಿ ಮತ್ತು ಅಂತರರಾಷ್ಟ್ರೀಯ ಚಿಂತನಕಾರ ಎಂದು ಗುರ್ತಿಸಿ, ಮ್ಯಾಗ್ಸೆಸೆ ಪ್ರಶಸ್ತಿ ಘೋಷಿಸಲಾಗಿದೆ. 1957ರಲ್ಲಿ ವಿಮಾನ ಅಪಘಾತದಿಂದ ಸಾವಿಗೀಡಾದ ಫಿಲಿಫೈನ್ಸ್ನ ಮಾಜಿ ಅಧ್ಯಕ್ಷ ಆರ್.ಮ್ಯಾಗ್ಸೆಸೆ ಅವರ ಹೆಸರಿನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಳ್ಳುವಂಥ ಸೇವೆ ಸಲ್ಲಿಸಿದವರಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications