ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ, 25 ಲಕ್ಷ ರೂ. ನಷ್ಟ
ಮಲ್ಪೆ : ಇಲ್ಲಿನ ಮೀನುಗಾರಿಕೆ ಬಂದರು ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಎರಡು ಮೀನುಗಾರಿಕಾ ದೋಣಿಗಳು ಸುಟ್ಟು ಹೋಗಿದ್ದು, ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ.
ಮಳೆಗಾಲ ಆರಂಭವಾದಾಗಿನಿಂದ ಸಮುದ್ರದಿಂದ ಮೇಲಕ್ಕೆಳೆದು ನಿಲ್ಲಿಸಲಾಗಿದ್ದ ಪಡುಕೆರೆಯ ವಾರಿಜ .ಡಿ. ಕುಂದರ್ ಅವರ ‘ಶುಭ ಸಂಪತ್‘ ಹಾಗೂ ಕುಸುಮ ಕೋಟ್ಯಾನ್ ಅವರ ‘ಶುಭನಿಧಿ’ ಮೀನುಗಾರಿಕಾ ದೋಣಿಗಳು ಬೆಂಕಿ ಅನಾಹುತಕ್ಕೆ ತುತ್ತಾಗಿವೆ. ಎರಡು ದೋಣಿಗಳಿಗೆ ಹೊತ್ತಿಕೊಂಡ ಬೆಂಕಿ ಬೇರೆಡೆಗೆ ಪಸರಿಸುವ ಮುಂಚೆಯೇ ಇತರ ದೋಣಿಗಳನ್ನು ಸ್ಥಳೀಯರು ದೂರ ಸರಿಸಿ, ನಡೆಯುತ್ತಿದ್ದ ಭಾರೀ ಅನಾಹುತವನ್ನು ತಪ್ಪಿಸಿದರು.
ಮಲ್ಪೆ ಪೊಲೀಸ್ ಠಾಣಾಧಿಕಾರಿ ದಿನೇಶ್ ಕುಮಾರ್ ಮತ್ತು ಉಡುಪಿಯ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಹರಡದಂತೆ ಕ್ರಮ ತೆಗೆದುಕೊಂಡರು. ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಯು. ಆರ್. ಸಭಾಪತಿ ವಿಧಾನ ಪರಿಷತ್ ಸದಸ್ಯ ವಿ. ಎಸ್. ಆಚಾರ್ಯ, ಬೆಂಕಿ ದುರಂತದಲ್ಲಿ ಆಗಿರುವ ನಷ್ಟವನ್ನು ಅಂದಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಸಿ, ದೋಣಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಒದಗಿಸುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications