ಹಲವು ವಸ್ತುಗಳಿಗೆ ತೆರಿಗೆ ವಿನಾಯಿತಿ : ಎಸ್.ಎಂ. ಕೃಷ್ಣ ಘೋಷಣೆ
ಬೆಂಗಳೂರು : ಯು.ಪಿ.ಎಸ್., ವೈದ್ಯಕೀಯ ಉಪಕರಣಗಳ ಮೇಲಿನ ತೆರಿಗೆ ಕಡಿತ, ನಿಮಾನ್ಹ್ ಖರೀದಿಸುವ ವೈದ್ಯಕೀಯ ಉಪಕರಣಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ, ರೇಷ್ಮೆ ಹಾಗೂ ಕಂಬಳಿ ಮೇಲಿನ ವಿಲಾಸಿ ತೆರಿಗೆ ಸಂಪೂರ್ಣ ರದ್ದು, ಹಪ್ಪಳದ ಮೇಲಿನ ಮಾರಾಟ ತೆರಿಗೆಗೆ ವಿನಾಯಿತಿ ನೀಡುವುದಾಗಿ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಘೋಷಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಎಸ್.ಎಂ. ಕೃಷ್ಣ ಅವರು, ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ವಿಧಿಸಲಾಗಿರುವ ಶೇ 12ರಷ್ಟು ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಕೂಡ ರಾಜ್ಯ ಸರಕಾರ ಪರಿಶೀಲಿಸುತ್ತಿದೆ. ಯು.ಪಿ.ಎಸ್. ಮೇಲಿನ ತೆರಿಗೆಯನ್ನು ಶೇ.10ರಿಂದ 4ಕ್ಕೆ ಇಳಿಸಲಾಗುತ್ತಿದೆ ಎಂದರು.
ಪ್ರವೇಶ ತೆರಿಗೆ ನೀತಿಗೆ ಸುಧಾರಣೆ ತರಲು ಉದ್ದೇಶಿಸಲಾಗಿದೆ. ಬ್ರೆಡ್, ಬಟರ್ ಐಸ್‌ಕ್ರೀಂ, ಬೀಡಿ, ಸಿಗರೇಟ್, ಕಂಪ್ಯೂಟರ್, ಕಂಪ್ಯೂಟರ್ ಬಿಡಿಭಾಗ, ಸಾಫ್ಟ್‌ವೇರ್‌ಗಳಿಗೆ ಕೂಡ ತೆರಿಗೆ ವಿನಾಯಿತಿ ಪ್ರಕಟಿಸಲಾಗಿದೆ ಎಂದರು. ಕೇಂದ್ರ ಸರಕಾರದಿಂದ 3,071 ಕೋಟಿ ರುಪಾಯಿಗಳ ಆರ್ಥಿಕ ನೆರವು ಬರಬೇಕಿದೆ. ನೀರಾವರಿಗೆ 1,598 ಕೋಟಿ ರು, ವಿದ್ಯುತ್ ಕ್ಷೇತ್ರಕ್ಕೆ 2,341 ಕೋಟಿ ರು, ವಸತಿಗಾಗಿ 39 ಕೋಟಿ ರು, ಕುಡಿಯುವ ನೀರಿಗಾಗಿ 708 ಕೋಟಿ ರುಪಾಯಿ, ಕೃಷಿಗೆ 346 ಕೋಟಿ ರು. ರೂಢಿಸಲು ಉದ್ದೇಶಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಬೆಂಗಳೂರು ಮೆಗಾಸಿಟಿ ಯೋಜನೆಯ ಅಡಿಯಲ್ಲಿ ನಗರದ ಹೊರಗೆ 336 ಕೋಟಿ ರುಪಾಯಿ ವೆಚ್ಚದ 29 ಯೋಜನೆಗಳನ್ನು ಕೈಗೆತ್ತಿಕೊಂಡಿರುವುದಾಗಿ ಅವರು ತಿಳಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಕೇವಲ ಟೀಕೆಯನ್ನಷ್ಟೇ ಮಾಡದೆ, ರಾಜ್ಯದ ಹೀತದ ದೃಷ್ಟಿಯಿಂದ ಹಲವು ಉಪಯುಕ್ತ ಹಾಗೂ ರಚನಾತ್ಮಕ ಸಲಹೆಗಳನ್ನು ನೀಡಿದ ಪ್ರತಿಪಕ್ಷಗಳಿಗೆ ಕೃಷ್ಣ ಕೃತಜ್ಞತೆ ಅರ್ಪಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications