ಹುಣಸೂರು ಬಳಿ ರಸ್ತೆ ಅಪಘಾತ : 6 ಸಾವು, 25 ಮಂದಿಗೆ ಗಾಯ
ಮೈಸೂರು : ಹುಣಸೂರು ಬಳಿಯ ಕಲ್ಲುಬೆಟ್ಟದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಮ್ಯಾಕ್ಸಿಕ್ಯಾಬ್ ನಡುವೆ ಸೋಮವಾರ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ 6 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಣಸೂರಿನಿಂದ ಹೊಳೆನರಸೀಪುರದ ಕಡೆಗೆ ಹೋಗುತ್ತಿದ್ದ ಬಸ್ಗೆ ವೀರಾಜಪೇಟೆಯಿಂದ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದು, ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಪ್ಪಿರುವ ಎಲ್ಲರೂ ದೂರವಾಣಿ ಇಲಾಖೆಯ ಆಪ್ಟಿಕ್ ಫೈಬರ್ ತಂತು ಯೋಜನೆಯ ಕೂಲಿ ಕಾರ್ಮಿಕರಾಗಿದ್ದರು. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚೂಡಸಮುದ್ರಂ ಗ್ರಾಮದ ಕದ್ರಿ ಗೋಪಿನಾಥ್ (40), ಮಲ್ಲಿಕಾರ್ಜುನ (35), ಮಹಬೂಬ್ ಸಾಬ್ (40) ಹಾಗೂ ಉತ್ತಣ್ಣ (50) ಅಪಘಾತಕ್ಕೀಡಾದ ದುರ್ದೈವಿಗಳು. ಮೃತಪಟ್ಟಿರುವ ಇನ್ನಿಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications