Get Updates
Get notified of breaking news, exclusive insights, and must-see stories!

ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್‌ ಶಿಕ್ಷಣಕ್ಕೆ 33 ಲಕ್ಷ ರು. ಬಿಡುಗಡೆ

ಬೆಂಗಳೂರು : ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ನೀಡುವ ನಿಟ್ಟಿನಲ್ಲಿ 2001-02ನೇ ಸಾಲಿನ ಆಯವ್ಯಯದಲ್ಲಿ 33 ಲಕ್ಷ ರುಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ವಿಷಯವನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್‌ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ್‌ ಅವರ ಪ್ರಶ್ನೆಯಾಂದಕ್ಕೆ ಉತ್ತರ ನೀಡುತ್ತಿದ್ದ ಸಚಿವರು, ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೂ ಕಂಪ್ಯೂಟರ್‌ ವಿಜ್ಞಾನವನ್ನು ಕಡ್ಡಾಯಗೊಳಿಸಿಲ್ಲ. ಅದನ್ನು ಐಚ್ಛಿಕ ವಿಷಯ ಎಂದು ಪರಿಗಣಸಿವೆ. ಆದರೂ, ರಾಜ್ಯದ 10 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ಅಳವಡಿಸಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದರು.

ಪ್ರವೇಶ ಪರೀಕ್ಷೆ ಮುಂದೂಡಿಕೆ : ಆಗಸ್ಟ್‌ 5ರಂದು ನಡೆಸಲು ಉದ್ದೇಶಿಸಿದ್ದ ಬಿ.ಎಡ್‌. ಪ್ರವೇಶ ಪರೀಕ್ಷೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ ಎಂದು ಸಚಿವ ಜಿ. ಪರಮೇಶ್ವರ್‌ ಪ್ರಕಟಿಸಿದ್ದಾರೆ. ಬಿಎಡ್‌ ಪರೀಕ್ಷೆಯಲ್ಲಿ ಕನ್ನಡಕ್ಕೆ ಅಸಡ್ಡೆ ತೋರಲಾಗಿದ್ದು, ಕನ್ನಡವನ್ನು ಮೂರನೇ ಸ್ಥಾನಕ್ಕೆ ತಳ್ಳಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿ, ಸೋಮವಾರ ಧರಣಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬಿಎಡ್‌ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಕ್ಕೆ ತೃತೀಯ ಸ್ಥಾನ ನೀಡಿ ಕೇವಲ 30 ಅಂಕಗಳನ್ನು ಮಾತ್ರ ನಿಗದಿ ಪಡಿಸಿರುವುದು ಪ್ರತಿಪಕ್ಷ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷೆಯನ್ನು ಮುಂದೂಡಿ, ಬರಗೂರು ರಾಮಚಂದ್ರಪ್ಪ ಅವರು ನೀಡಿರುವ ವರದಿಯ ರೀತ್ಯ ಕನ್ನಡಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಬಸವರಾಜ ಹೊರಟ್ಟಿ, ನಾಣಯ್ಯ ಮೊದಲಾದವರು ಸೋಮವಾರ ಆಗ್ರಹಿಸಿದ್ದರು.

ಪ್ರತಿಪಕ್ಷ ನಾಯಕರ ಹಾಗೂ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಸರಕಾರ, ಪರೀಕ್ಷೆಯನ್ನು 2 ವಾರ ಮುಂದೂಡಿ, ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯ ನೀಡುವುದಾಗಿ ಮಂಗಳವಾರ ಪ್ರಕಟಿಸಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+