ಶೀಘ್ರವೇ ನೀವು ಇಂಟರ್‌ನೆಟ್ ಮೂಲಕ ವಿಮಾ ಕಂತು ಕಟ್ಟಬಹುದು
ಬೆಂಗಳೂರು : ಜೀವವಿಮಾ ಪಾಲಿಸಿದಾರರಿಗೆ, ಇಂಟರ್‌ನೆಟ್ ಮೂಲಕ ಪ್ರೀಮಿಯಂ ಹಣವನ್ನು ಪಾವತಿ ಮಾಡಲು ಅತಿ ಶೀಘ್ರದಲ್ಲೇ ಅವಕಾಶ ಕಲ್ಪಿಸಲಾಗುವುದು ಎಂದು ಜೀವ ವಿಮಾ ನಿಗಮದ ರಾಷ್ಟ್ರೀಯ ಅಧ್ಯಕ್ಷ ಜಿ.ಎನ್. ಬಾಜಪೈ ಸೋಮವಾರ ತಿಳಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಮಂಡಳದಲ್ಲಿ ವಾಣಿಜ್ಯೋದ್ಯಮಿಗಳ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಬರುವ ಸವಾಲುಗಳನ್ನು ಎದುರಿಸಲು ನಿಗಮ ಸಿದ್ಧವಾಗಿದೆ. ಗ್ರಾಹಕರ ಅನುಕೂಲಕ್ಕಾಗಿ ಹೊಸ ಹಾಗೂ ಅತ್ಯಾಧುನಿಕ ಸೌಲಭ್ಯ ಒದಗಿಸಲು ಮುಂದಾಗಿದೆ ಎಂದರು.
ಪ್ರಸಕ್ತ ಸನ್ನಿವೇಶದಲ್ಲಿ ನಿಗಮಕ್ಕೆ ತಾಂತ್ರಿಕತೆಯ ಕೊರತೆ ಇದೆ. ಹಾಲಿ 41 ನಗರಗಳಲ್ಲಿನ ವಿಮಾ ಕಚೇರಿಗಳಿಗೆ ಇಂಟರ್‌ನೆಟ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನು ಒಂದು ವರ್ಷದೊಳಗೆ 100 ನಗರಗಳಿಗೆ ಈ ವ್ಯವಸ್ಥೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದರು.
ಪ್ರಸ್ತುತ ಜೀವ ವಿಮಾ ನಿಗಮವು 12 ಕೋಟಿ ಪಾಲಿಸಿದಾರರನ್ನು ಹೊಂದಿದೆ. 500 ತರಬೇತಿ ಕೇಂದ್ರಗಳನ್ನು ರಾಷ್ಟ್ರಾದ್ಯಂತ ಸ್ಥಾಪಿಸಲಾಗಿದೆ. ಅಧಿಕಾರಿಗಳ ವೃತ್ತಿ ಕೌಶಲ ಹೆಚ್ಚಿಸಲು ಹೈದರಾಬಾದ್ ಮೂಲದ ಅಂತಾರಾಷ್ಟ್ರೀಯ ವಾಣಿಜ್ಯ ಅಧ್ಯಯನ ಶಾಲೆಯಾಂದಿಗೆ ಒಪ್ಪಂದ ಮಾಡಿಕೊಳ್ಳುವ ಯೋಜನೆ ರೂಪಿಸಲಾಗುತ್ತಿದೆ.
ನಿಗಮದಿಂದ ಸಾರ್ವಜನಿಕ ವಲಯಗಳಿಗೆ 140 ಲಕ್ಷ ಕೋಟಿ ರುಪಾಯಿ, ಸಹಕಾರಿ ವಲಯಕ್ಕೆ 216 ಲಕ್ಷ ಕೋಟಿ ರುಪಾಯಿ ಹಾಗೂ ಗೃಹ ನಿರ್ಮಾಣ ಕ್ಷೇತ್ರಕ್ಕೆ 15 ಸಾವಿರ ಕೋಟಿ ರುಪಾಯಿ, ಸಾರಿಗೆ ಮತ್ತಿತರ ವಲಯಗಳಿಗೆ ಮೂರು ಸಾವಿರ ಕೋಟಿ ರುಪಾಯಿ ಒದಗಿಸಲಾಗಿದೆ ಎಂದು ಅವರು ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications