ನಾನೀಗ ಫಿಟ್ ಆಗಿದ್ದೇನೆ- ಬಿಸಿಸಿಐಗೆ ಸಚಿನ್ ಪತ್ರ
ನವ ದೆಹಲಿ : ನನ್ನ ಬಲಗಾಲ ಹೆಬ್ಬೆಟ್ಟಿನ ಮೂಳೆಯ ಕೂದಲೆಳೆಯಷ್ಟು ಬಿರುಕಿನ ತಂದರೆಯೀಗ ಬಗೆಹರಿದಿದೆ. ಸಾಕಷ್ಟು ಗುಣಮುಖನಾಗಿದ್ದು, ಆಗಸ್ಟ್ 10ರ ವೈದ್ಯಕೀಯ ಪರೀಕ್ಷೆ ನಂತರ ಕ್ರಿಕೆಟ್ಟಿಗೆ ಮರಳುವ ಬಗ್ಗೆ ಅಧಿಕೃತ ಹೇಳಿಕೆ ಕೊಡುತ್ತೇನೆ- ಸಚಿನ್ ತೆಂಡೂಲ್ಕರ್ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗೆ ಸೋಮವಾರ ಈ ರೀತಿ ಪತ್ರ ಬರೆದಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯವಂತ ಲೆಲೆ ಮಂಗಳವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ.
ಶ್ರೀಲಂಕಾದಲ್ಲಿ 3 ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 14ರಂದು ಪ್ರಾರಂಭವಾಗಲಿದೆ. ಆಗಸ್ಟ್ 2ರಂದು ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗುವುದು. ಸಚಿನ್‌ಗೆ ತಂಡದಲ್ಲಿ ಜಾಗೆಯನ್ನು ಮೀಸಲಿಡಲು ನಿರ್ಧರಿಸಿದ್ದೇವೆ. ಪೂರ್ಣ ಗುಣಮುಖರಾಗುವ ಮುನ್ನ ಆಡುವಂತೆ ಅವರನ್ನು ಮಂಡಳಿ ಯಾವುದೇ ಕಾರಣಕ್ಕೂ ಒತ್ತಾಯಿಸುವುದಿಲ್ಲ ಎಂದು ಲೆಲೆ ಸ್ಪಷ್ಟಪಡಿಸಿದ್ದಾರೆ.
ಲಕ್ಷ್ಮಣ್, ಆಶಿಶ್ ನೆಹ್ರಾ ಹಾಗೂ ಜಾಹಿರ್ ಖಾನ್ ಕೂಡ ಗಾಯಾಳುಗಳಾಗಿದ್ದು, ಭಾರತ- ಶ್ರೀಲಂಕಾ- ನ್ಯೂಜಿಲೆಂಡ್ ನಡುವಣ ನಡೆಯುತ್ತಿರುವ ಒಂದು ದಿನದ ಪಂದ್ಯಗಳ ತ್ರಿಕೋನ ಸರಣಿ ಮುಗಿದ ನಂತರ ಗಾಯಾಳುಗಳು ತವರಿಗೆ ಮರಳಿ ಚಿಕಿತ್ಸೆ ಪಡೆಯಲಿದ್ದಾರೆ. ಆಟಗಾರರ ಆರೋಗ್ಯದ ತೊಂದರೆ ಉಲ್ಬಣಿಸದಂತೆ ಎಚ್ಚರ ವಹಿಸಲು ತಂಡದ ಮ್ಯಾನೇಜ್‌ಮೆಂಟ್‌ಗೆ ಹೇಳಿದ್ದೇವೆ. ಪ್ರಸಕ್ತ ಪರಿಸ್ಥಿತಿಯಲ್ಲಿ ಸಚಿನ್ ಪುನರಾಗಮನ ಭಾರತ ತಂಡಕ್ಕೆ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಮಂಡಳಿಗೆ ಅವರು ಬರೆದಿರುವ ಪತ್ರ ಖುಷಿ ತಂದಿದೆ ಎಂದು ಲೆಲೆ ಹೇಳಿದ್ದಾರೆ.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications