ತುಂಗಭದ್ರೆಯಲ್ಲಿ ನೀರಿಗೆ ಕೊರೆ, ನಾರಾಯಣಪುರ ಅಣೆಕಟ್ಟೆ ಭರ್ತಿ
ಮುನಿರಾಬಾದ್ : ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಉಂಟಾಗಿದ್ದು , ಅಚ್ಚುಕಟ್ಟುದಾರರು ಜಲಾಶಯದ ನೀರನ್ನು ಮಿತವ್ಯಯದಿಂದ ಬಳಸಬೇಕೆಂದು ಮುನಿರಾಬಾದ್ನ ತುಂಗಭದ್ರಾ ಯೋಜನಾ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಆರ್.ಆರ್. ಕುಷ್ಟಗಿ ತಿಳಿಸಿದ್ದಾರೆ.
ಬಳ್ಳಾರಿ, ರಾಯಚೂರು ಹಾಗೂ ಆಂಧ್ರಪ್ರದೇಶದ ಲಕ್ಷಾಂತರ ಎಕರೆ ಕೃಷಿ ಪ್ರದೇಶಕ್ಕೆ ನೀರುಣಿಸುತ್ತಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಕಳೆದ ವರ್ಷಕ್ಕಿಂತ 44.45 ಟಿಎಂಸಿಯಷ್ಟು ಕಡಿಮೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 64.538 ಟಿಎಂಸಿ ನೀರಿದೆ ಎಂದು ಕುಷ್ಟಗಿ ತಿಳಿಸಿದ್ದಾರೆ.
ನಾರಾಯಣಪುರ ಜಲಾಶಯ ಭರ್ತಿ .. !
ಮಹಾರಾಷ್ಟ್ರದ ರತ್ನಗಿರಿ ತೊಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು , ಕೃಷ್ಣಾ ನದಿ ಮೈದುಂಬಿಕೊಂಡು ಹರಿಯುತ್ತಿದೆ. ಇದರಿಂದಾಗಿ ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ರಾಜ್ಯದ ಬೃಹತ್ ನೀರಾವರಿ ಯೋಜನೆಗಳಲ್ಲೊಂದಾದ ಕೃಷ್ಣಾ ಮೇಲ್ದಂಡೆ ಯೋಜನೆಯ ನಾರಾಯಣಪುರ ಜಲಾಶಯ ಭರ್ತಿಯಾಗಿದೆ.
ಆಲಮಟ್ಟಿ ಜಲಾಶಯ ಕೂಡ ತುಂಬಿದ್ದು , ಆಲಮಟ್ಟಿಯ ಕೆಳಭಾಗದಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. 492.52 ಮೀಟರ್ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 491.626 ಮೀಟರ್ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 489.220 ಮೀಟರ್ ನೀರು ಜಲಾಶಯದಲ್ಲಿತ್ತು .
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications