ಬೃಂದಾವನ ಗಾರ್ಡನ್ಸ್ ಆಧುನೀಕರಣಕ್ಕೆ ವಿಶೇಷ ಯೋಜನೆ
ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟೆ ನೋಡಲು ಹೋಗುವವರಿಗೆ ಪಕ್ಕದಲ್ಲೇ ಇರುವ ಬೃಂದಾವನ ಗಾರ್ಡನ್ಸ್ ಪ್ರಮುಖ ಆಕರ್ಷಣೆ. ಆದರೆ, ಇತ್ತೀಚೆಗೆ ಇಲ್ಲಿನ ನಿರ್ವಹಣೆ ಬಗ್ಗೆ ಹಲವು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಉದ್ಯಾನವನ್ನು ಆಧುನೀಕರಣಗೊಳಿಸಲು ಬೃಹತ್ ಯೋಜನೆಯಾಂದನ್ನು ತಯಾರಿಸಲಾಗಿದೆ.
ಈ ವಿಷಯವನ್ನು ರಾಜ್ಯ ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಬೃಂದಾವನ ಗಾರ್ಡನ್ಸ್‌ಗೆ ಮತ್ತೆ ಹಿಂದಿನ ಮೆರುಗು ತಂದುಕೊಡಲಾಗುವುದು ಎಂದು ಅವರು ಹೇಳಿದರು.
ಆಧುನೀಕರಣದ ನೀಲನಕ್ಷೆ ಸಿದ್ಧವಾಗಿದೆ. ಇಲಾಖಾ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯಾಂದನ್ನು ರಚಿಸಲಾಗಿದೆ. ಉದ್ಯಾನದಲ್ಲಿ ದೋಣಿ ವಿಹಾರ ಹಾಗೂ ಕೊಯಮತ್ತೂರಿನ ಬಳಿ ಇರುವ ಬ್ಲಾಕ್ ಥಂಡರ್ (ಜಲ ಸಾಹಸ ಮನರಂಜನೆ ಪಾರ್ಕ್) ಮಾದರಿಯ ಪಾರ್ಕ್ ನಿರ್ಮಾಣ ಮೊದಲಾದ ಕಾಮಗಾರಿಗಳನ್ನು ಅತಿಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಉದ್ಯಾನದ ಆಧುನೀಕರಣ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ ಸಚಿವ ರೋಷನ್ ಬೇಗ್ ಅವರೊಂದಿಗೆ ಚರ್ಚಿಸಲಾಗಿದೆ. ಸಚಿವರು ಸ್ಥಳ ಪರಿಶೀಲನೆ ಸಹ ನಡೆಸಿದ್ದಾರೆ ಎಂದು ಪಾರ್ವತಮ್ಮ ಶ್ರೀಕಂಠಯ್ಯ ಅವರ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಪಾಟೀಲ್ ತಿಳಿಸಿದರು.
ಕೆ.ಆರ್.ಎಸ್.ನಲ್ಲಿ ಪ್ರವೇಶ ದರವನ್ನು 5 ರುಪಾಯಿಯಿಂದ 10 ರು.ಗೆ ಏರಿಸಿರುವ ಬಗ್ಗೆ ರಾಮದಾಸ್ ಆಕ್ಷೇಪ ವ್ಯಕ್ತಪಡಿಸಿದರೆ, ಟ್ಯಾಕ್ಸಿಗಳಲ್ಲಿ ಬೃಂದಾವನಕ್ಕೆ ತೆರಳುವವರಿಗೆ ಮೂರು ಹಂತಗಳಲ್ಲಿ 50-60 ರು. ವಿಧಿಸುವ ಮೂಲಕ ಶೋಷಣೆ ಮಾಡಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ಆರೋಪಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications