ರಾಘವೇಂದ್ರ ಮಠದಿಂದ ತುಂಗಭದ್ರಾ ನದಿ ನಿರ್ಮಲೀಕರಣ ಯೋಜನೆ
ಬೆಂಗಳೂರು : 2 ಕೋಟಿ ರುಪಾಯಿ ವೆಚ್ಚದಲ್ಲಿ ತುಂಗಭದ್ರಾ ನದಿಯ ನಿರ್ಮಲೀಕರಣ ಯೋಜನೆಯನ್ನು ಮಂತ್ರಾಲಯದ ರಾಘವೇಂದ್ರ ಮಠ ಹಮ್ಮಿಕೊಳ್ಳಲಿದೆ ಎಂದು ರಾಘವೇಂದ್ರ ಮಠದ ಅರಳು ಮಲ್ಲಿಗೆ ಪಾರ್ಥ ಸಾರಥಿ ತಿಳಿಸಿದ್ದಾರೆ.
ಆಗಸ್ಟ್ 2 ರಿಂದ 9 ರವರೆಗೆ ಮಂತ್ರಾಲಯದಲ್ಲಿ ನಡೆಯುವ ರಾಘವೇಂದ್ರ ಸ್ವಾಮಿಗಳ ಆರಾಧನ ಉತ್ಸವವನ್ನು ರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸಲಾಗುವುದು ವಿಶಿಷ್ಟ ಸೇವೆ ಸಲ್ಲಿಸಿದ ಸಮಾಜ ಸೇವಕರಿಗೆ ಪ್ರಶಸ್ತಿ ನೀಡುವ ಯೋಜನೆಯನ್ನು ಕೂಡ ಮಂತ್ರಾಲಯದ ಮಠ ಹೊಂದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪಾರ್ಥಸಾರಥಿ ಹೇಳಿದರು.
ಈ ಬಾರಿಯ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಸುಸಜ್ಜಿತ ಗ್ರಂಥ ಭಂಡಾರ, ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪ, ಮಠದ ಪರಂಪರೆಯನ್ನು ಬಿಂಬಿಸುವ ವಸ್ತು ಸಂಗ್ರಹಾಲಯ ಮತ್ತು 2 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 100 ಕೊಠಡಿಗಳ ವಿಜಯೇಂದ್ರ ಹಾಗೂ ಬೃಂದಾವನ ವಸತಿಗೃಹಗಳನ್ನು ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು.
ಮಂತ್ರಾಲಯ ಮಠದ ಮುಂಭಾಗದಲ್ಲಿ ಕಾರಂಜಿ ಹಾಗೂ ಹಸುರು ಹಾಸಿನ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಜೋಡುರಸ್ತೆ ಆರಾಧನೆ ಸಂದರ್ಭದಲ್ಲಿ ಉದ್ಘಾಟನೆಯಾಗಲಿವೆ. ಇದೇ ಸಂದರ್ಭದಲ್ಲಿ 5 ಕೋಟಿ ರು. ವೆಚ್ಚದಲ್ಲಿ ಭೋಜನಶಾಲೆ ನಿರ್ಮಾಣ ಹಾಗೂ 1 ಕೋಟಿ ರುಪಾಯಿ ವೆಚ್ಚದಲ್ಲಿ ಶಿಕ್ಷಣ ಸಂಸ್ಥೆಗಳ ಸಮುಚ್ಛಯ ನಿರ್ಮಾಣ ಮುಂತಾದ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಮಠ ಚಾಲನೆ ನೀಡಲಿದೆ ಎಂದು ಅರಳುಮಲ್ಲಿಗೆ ಪಾರ್ಥಸಾರಥಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications