ವಾಜಪೇಯಿಗೆ ಬೆನ್ನೆಲುಬಾಗಿ ನಿಲ್ಲಲು ಎನ್ಡಿಎ ಸಭೆ ನಿರ್ಣಯ
ನವದೆಹಲಿ : ಪ್ರಧಾನಿ ವಾಜಪೇಯಿ ನೇತೃತ್ವದಲ್ಲಿ ಸಂಪೂರ್ಣ ನಂಬಿಕೆ ಹಾಗೂ ವಿಶ್ವಾಸವನ್ನು ವ್ಯಕ್ತಪಡಿಸಿರುವ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದ ಸಭೆ, ಒಕ್ಕೂಟದ ನೇತೃತ್ವ ವಹಿಸಲು ವಾಜಪೇಯಿ ಸಮರ್ಥ ನಾಯಕರು ಎಂದು ಅಭಿಪ್ರಾಯ ಪಟ್ಟಿದೆ.
ಬುಧವಾರ ಬೆಳಗ್ಗೆ (ಆಗಸ್ಟ್ 1) ವಾಜಪೇಯಿ ನಿವಾಸದಲ್ಲಿ ಸಭೆ ಸೇರಿದ ಎನ್ಡಿಎ ನಾಯಕರು ಪ್ರಧಾನಿಯವರಲ್ಲಿ ತಮ್ಮ ಸಂಪೂರ್ಣ ನಂಬುಗೆ ವ್ಯಕ್ತಪಡಿಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಪರ್ಕ ಖಾತೆ ಸಚಿ ರಾಮ್ವಿಲಾಸ್ ಪಾಸ್ವಾನ್ ‘ಸದ್ಯಕ್ಕೆ ಒಕ್ಕೂಟದ ನಾಯಕತ್ವ ವಹಿಸಲು ವಾಜಪೇಯಿ ಅವರಿಗಿಂತ ಉತ್ತಮ ನಾಯಕರು ಬೇರೆ ಇಲ್ಲ ’ ಎಂದು ಹೇಳಿದರು.
ಸರ್ಕಾರದೊಂದಿಗೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಶಿವಸೇನೆ ಬುಧವಾರ ನಡೆದ ಎನ್ಡಿಎ ಸಭೆಯಲ್ಲಿ ಭಾಗವಹಿಸಿರಲಿಲ್ಲ . ಕೆಲವು ಮಿತ್ರ ಪಕ್ಷಗಳು ಯುಟಿಐ ಸೇರಿದಂತೆ ಇತ್ತೀಚಿನ ಕೆಲವು ಪ್ರಕರಣಗಳ ಬಗ್ಗೆ ಒಡಕು ಮಾತು ಆಡಿದ ಹಿನ್ನೆಲೆಯಲ್ಲಿ ಪ್ರಧಾನಿ ವಾಜಪೇಯಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದರಿಂದ ಬುಧವಾರದ ಸಭೆ ಜರುಗಿತು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications