ರೈತರ ಆತ್ಮಹತ್ಯೆ : ವೈಜ್ಞಾನಿಕ ಅಧ್ಯಯನಕ್ಕೆ ಸಮಿತಿ ರಚನೆ - ಎಸ್.ಎಂ. ಕೃಷ್ಣ
ಬೆಂಗಳೂರು : ರಾಜ್ಯದಲ್ಲಿ ಒಂದು ಪಿಡುಗಾಗಿ ಪರಿಣಮಿಸುತ್ತಿರುವ, ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ರೈತರ ಆತ್ಮಹತ್ಯೆಗೆ ನಿಜವಾದ ಕಾರಣವೇನೆಂದು ಅರಿಯಲು ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಬೈರೇಗೌಡರು ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ರೈತ ನಾರಾಯಣಸ್ವಾಮಿ ಆತ್ಮಹತ್ಯೆ ವಿಷಯ ಪ್ರಸ್ತಾಪಿಸಿದಾಗ, ಈ ಅಧಿವೇಶನ ಮುಗಿವ ಮೊದಲೇ ರೈತರ ಆತ್ಮಹತ್ಯೆ ಬಗ್ಗೆ ಅಧ್ಯಯನ ನಡೆಸಲು ಮನಶ್ಶಾಸ್ತ್ರಜ್ಞರನ್ನು ಒಳಗೊಂಡ ತಜ್ಞರ ಸಮಿತಿಯಾಂದನ್ನು ರಚಿಸಲಾಗುವುದು ಎಂದು ಕೃಷ್ಣ ಪ್ರಕಟಿಸಿದರು.
ರೈತರ ಆತ್ಮಹತ್ಯೆ ರಾಜ್ಯಕ್ಕೆ ಶೋಭೆ ತರುವ ವಿಷಯವಲ್ಲ. ಯಾರಿಗೂ ಸಂತೋಷ ತರುವ ಸಂಗತಿಯೂ ಅಲ್ಲ. ಆತ್ಮಹತ್ಯೆ ರಾಷ್ಟ್ರದ ಆರ್ಥಿಕ ಸಂದಿಗ್ಧತೆಯಿಂದ ನಡೆಯುತ್ತಿದೆ. ಈ ಪಿಡುಗನ್ನು ತಡೆಯಲು ಪಕ್ಷಾತೀತವಾಗಿ ಹೋರಾಟ ನಡೆಸುವಂತೆ ಅವರು ಪ್ರತಿಪಕ್ಷ ನಾಯಕರಿಗೆ ಕರೆ ನೀಡಿದರು. ರೈತರ ಆತ್ಮಹತ್ಯೆಗೆ ನೈಜ ಕಾರಣ ಅರಿಯಲು ಸರಕಾರ ಕೈಗೊಂಡಿರುವ ಈ ಪ್ರಯತ್ನಕ್ಕೆ ಸಹಕಾರ ನೀಡುವಂತೆ ಅವರು ಕೋರಿದರು.
ರೈತರು 100 ರುಪಾಯಿಗೆ 10 ರುಪಾಯಿ ಬಡ್ಡಿ ನೀಡುತ್ತಿದ್ದಾರೆ. ಈ ಲೇವಾದೇವಿ ವ್ಯವಹಾರವೂ ರೈತರ ಆತ್ಮಹತ್ಯೆಗೆ ಕಾರಣವಾಗಿದೆ. ಇಂತಹ ಬಡ್ಡಿ ವ್ಯವಹಾರವನ್ನು ತಡೆಯಬೇಕು ಎಂದು ಶಾಸಕ ಶ್ರೀನಿವಾಸಗೌಡ ಒತ್ತಾಯಿಸಿದರೆ, ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಮನೋಸ್ಥೈರ್ಯ ತುಂಬವ ಕೆಲಸ ಮಾಡಬೇಕೆಂದು ಜಗದೀಶಶೆಟ್ಟರ್ ಸಲಹೆ ಮಾಡಿದರು.
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications