Get Updates
Get notified of breaking news, exclusive insights, and must-see stories!

ಉತ್ತರ ಕರ್ನಾಟಕದಲ್ಲಿ ನಾಟಕ ಅಕಾಡೆಮಿ ರಜತೋತ್ಸವ ಸಂಭ್ರಮ

ಬೆಳಗಾವಿ : ರಾಜ್ಯ ನಾಟಕ ಅಕಾಡೆಮಿಗೆ ಈ ವರ್ಷ ರಜತೋತ್ಸವದ ಸಂಭ್ರಮ. ಈ ಸಂಭ್ರಮವನ್ನು ಉತ್ತರ ಕರ್ನಾಟಕದ ಹೊಸ ಜಿಲ್ಲೆಗಳಲ್ಲಿ ಆಚರಿಸಲು ಅಕಾಡೆಮಿ ನಿರ್ಧರಿಸಿದೆ. ಉತ್ತರ ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಐದು ಜಿಲ್ಲೆಗಳಲ್ಲಿ ನಾಟಕೋತ್ಸವ ನಡೆಯಲಿದೆ.

ದಾವಣಗೆರೆ, ಕೊಪ್ಪಳ, ಹಾವೇರಿ, ಗದಗ ಮತ್ತು ಬಾಗಲಕೋಟೆಗಳಲ್ಲಿ ನಾಟಕೋತ್ಸವವನ್ನು ನಡೆಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ನಾಟಕ ಅಕಾಡೆಮಿ ಅಧ್ಯಕ್ಷ ಆರ್‌. ನಾಗೇಶ್‌ ತಿಳಿಸಿದರು. ಸೆಪ್ಟೆಂಬರ್‌ನಲ್ಲಿ ಮಕ್ಕಳ ನಾಟಕೋತ್ಸವವನ್ನು ಅಕಾಡೆಮಿ ಹಮ್ಮಿಕೊಂಡಿದ್ದು , ನವೆಂಬರ್‌ 14ರ ಮಕ್ಕಳ ದಿನದಂದು ಸಮಾರೋಪವಾಗುವಂತೆ ಉತ್ಸವವನ್ನು ಆಯೋಜಿಸಲಾಗುವುದು ಎಂದು ನಾಗೇಶ್‌ ತಿಳಿಸಿದರು.

ವಿಶ್ವಬ್ಯಾಂಕ್‌ ನೆರವಿನೊಂದಿಗೆ ನಡೆವ ಈ ನಾಟಕಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದವುಗಳಾಗಿರುತ್ತವೆ. ದೃಶ್ಯ ಮಾಧ್ಯಮವನ್ನು ಇತ್ತೀಚೆಗೆ ಪ್ರವೇಶಿಸಿದ ಹೊಸ, ಉದಯೋನ್ಮುಖ ಕಲಾವಿದರನ್ನೂ ನಾಟಕೋತ್ಸವದಲ್ಲಿ ಸೇರಿಸಿಕೊಳ್ಳಲಾಗುವುದು. ಐದು ಹೊಸ ಜಿಲ್ಲೆಗಳಲ್ಲಿ ನಡೆವ ನಾಟಕೋತ್ಸವದ ಖಚಿತ ದಿನವನ್ನು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ನಾಗೇಶ್‌ ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+