ಛೋಟಾ ರಾಜನ್ ಗುಂಪಿನ ಮೂವರು ಪೊಲೀಸರ ಗುಂಡಿಗೆ ಬಲಿ
ಬೆಂಗಳೂರು : ಛೋಟಾ ರಾಜನ್ ಗುಂಪಿಗೆ ಸೇರಿದವರೆನ್ನಲಾದ ಮುಂಬೈ ಭೂಗತ ಜಗತ್ತಿನ ಮೂವರು ಕುಖ್ಯಾತರನ್ನು ಬುಧವಾರ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೆಂಗಳೂರು ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ.
ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಈ ಮೂವರು ಕುಖ್ಯಾತರು ಪೊಲೀಸರು ನಡೆಸಿದ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಫ್ರೇಜರ್ ಟೌನ್ ಇನ್ಸ್ಪೆಕ್ಟರ್ ಶಿವರಾಂ ರೆಡ್ಡಿ , ಕಮರ್ಷಿಯಲ್ ಸ್ಟ್ರೀಟ್ ಇನ್ಸ್ಪೆಕ್ಟರ್ ಸೌದಾಗರ್ ಅವರು ಗುಂಡು ಹಾರಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಮುಖ ಅಪರಾಧವೊಂದನ್ನೆಸಗಲು ಈ ತಂಡದ ಸದಸ್ಯರು ಬೆಂಗಳೂರಿಗೆ ಆಗಮಿಸಿದ್ದು , ಬ್ಯಾಂಕಾಕ್ಗೆ ತೆರಳಲು ಉದ್ದೇಶಿಸಿದ್ದರು ಎನ್ನಲಾಗಿದೆ. ಜಗದೀಶ್ ಫಕೀರ್ ಶೆಟ್ಟಿ , ಸುಶೀಲ್ ಗಾಂವಕರ್ ಹಾಗೂ ಯಶವಂತ್ ಚಿಕ್ನಾ ಎಂದು ಸತ್ತವರನ್ನು ಗುರ್ತಿಸಲಾಗಿದ್ದು, ಮೃತರ ಶವಗಳನ್ನು ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಭರಣ ಅಂಗಡಿ ದರೋಡೆ ಪ್ರಕರಣವೊಂದರಲ್ಲಿ ಯಶವಂತ್ ಚಿಕ್ನಾ ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ .
ರೌಡಿಗಳ ಖಚಿತ ಸುಳಿವಿನ ಮೇಲೆ ನಗರಕ್ಕೆ ಆಗಮಿಸಿದ್ದ ಮುಂಬೈ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗುಂಡಿನ ಚಕಮಕಿಯಲ್ಲಿ ಪೊಲೀಸರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ . ಮೃತರಿಂದ ಎರಡು ವಿದೇಶಿ ಪಿಸ್ತೂಲ್ ಹಾಗೂ ಒಂದು ಸ್ವದೇಶಿ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications