ವರ್ಷದ ವ್ಯಕ್ತಿಯಾಗಿ ಬಾಲಗಂಗಾಧರನಾಥ ಸ್ವಾಮೀಜಿಗೆ ಸನ್ಮಾನ
ಬೆಂಗಳೂರು : ಸಹೇಲಿಯ ಕೊಳೆಗೇರಿ ಮಕ್ಕಳ ಹಾಗೂ ಮಹಿಳಾ ಅಭಿವೃದ್ಧಿ ಸಂಘಟನೆಯು ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ‘ವರ್ಷದ ವ್ಯಕ್ತಿ ’ ಎಂದು ಗುರುತಿಸಿದೆ.
ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುವುದು. ರಕ್ಷಾಬಂಧನ ದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲು ಸಂಸ್ಥೆಯು ನಿರ್ಧರಿಸಿದ್ದು, ಆಗಸ್ಟ್ 4ರ ಶನಿವಾರ ಸ್ವಾಮೀಜಿಗಳಿಗೆ ‘ವರ್ಷದ ವ್ಯಕ್ತಿ ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜೊತೆಗೆ ಸರಕಾರಿ ಕಾಲೇಜುಗಳಲ್ಲಿ ಓದಿ ಉತ್ತಮ ಅಂಕ ಪಡೆದ ಹತ್ತು ಮಂದಿ ವಿದ್ಯಾರ್ಥಿಗಳನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಧರ್ಮಗುರು ರಾಮಾನುಜ ಮಠದ ಜಗದ್ಗುರು ಕಿಂಕರ ಭೂದೇವಾನಂದ, ಫಾದರ್ ಜಯನಾಥನ್ ಮತ್ತು ಕಲಾವಿದ ಸಿ.ಆರ್. ಸಿಂಹ ಭಾಗವಹಿಸುವರು.
ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪುಸ್ತಕ ಮತ್ತು ಬಟ್ಟೆಗಳನ್ನು ಸಮಾರಂಭದಲ್ಲಿ ವಿತರಿಸಲಾಗುವುದು. ಅಲ್ಲದೆ ಆಸಕ್ತ ಬಡ ಮಹಿಳೆಯರಿಗೆ ಸ್ವ ಉದ್ಯೋಗ ಉಪಕರಣಗಳನ್ನು ಅಭಿವೃದ್ಧಿ ಸಂಘಟನೆ ವಿತರಿಸಲಿದೆ ಎಂದು ಸಂಘಟನೆಯ ಸ್ಥಾಪಕಾಧ್ಯಕ್ಷೆ ಕಿರಣ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications