ಬಾಲಕಿಗೆ ಡಿಕ್ಕಿ ಹೊಡೆದ ಜಿಲ್ಲಾಧಿಕಾರಿ ಕಾರು, ಕುಷ್ಟಗಿ ಉದ್ವಿಗ್ನ
ಕುಷ್ಟಗಿ : ವೇಗವಾಗಿ ಚಲಿಸುತ್ತಿದ್ದಾಗ ಜಿಲ್ಲಾಧಿಕಾರಿ ಕಾರು ಬಾಲಕಿಯಾಬ್ಬಳಿಗೆ ಡಿಕ್ಕಿ ಹೊಡೆದ ಪರಿಣಾವಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಜಿಲ್ಲಾಧಿಕಾರಿ ಸೇರಿದಂತೆ ಕೇಂದ್ರದ ಬರ ಅಧ್ಯಯನ ತಂಡದ ಇಬ್ಬರು ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳ ಕಾರಿಗೆ ಅಡ್ಡ ಬಂದಿರುವ ರೇಖಾ ಯಮನಪ್ಪ ಪುರದ ಎನ್ನುವ ಹತ್ತು ವರ್ಷದ ಬಾಲಕಿಯ ತಲೆ ಹಾಗೂ ಎದೆಗೆ ತೀವ್ರ ಪೆಟ್ಟಾಗಿದ್ದು , ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಕೆಗೆ ಕುಷ್ಟಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೇಖಾಳ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅಧಿಕಾರಿಗಳನ್ನು ಬಿಡಲಾಗುವುದಿಲ್ಲ ಎಂದು ಗ್ರಾಮಸ್ತರು ಪಟ್ಟು ಹಿಡಿದಿರುವುದರಿಂದ ಹಳ್ಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರ ರಕ್ಷಣಾ ವ್ಯವಸ್ಥೆಯನ್ನೂ ನಿರ್ಲಕ್ಷಿಸಿ ಗ್ರಾಮದಲ್ಲಿ ಎಲ್ಲ ಅಧಿಕಾರಿಗಳನ್ನೂ ಕೂಡಿ ಹಾಕಲಾಗಿದೆ.
ಘಟನೆಯಲ್ಲಿ 20 ಸರಕಾರಿ ವಾಹನಗಳು ಜಖಂಗೊಂಡಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯಾಚಿತ್ ಮತ್ತು ಜಿಲ್ಲಾಧಿಕಾರಿ ತುಷಾರ ಗಿರಿಧರನಾಥ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಎಲ್ಲ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
ಕೇಂದ್ರದ ಅಧಿಕಾರಿಗಳ ತಂಡ ರಾಯಚೂರಿನ ನಂತರ ಕೊಪ್ಪಳ ಜಿಲ್ಲೆ ಪ್ರವಾಸ ಕೈಗೊಂಡಿತ್ತು. ಕುಷ್ಟಗಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಸಭೆ ನಡೆಸಲು ತಂಡ ಹೊರಟಾಗ ಈ ಅಪಘಾತ ನಡೆಯಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications