ತಾಂತ್ರಿಕ ಹಿನ್ನಡೆ ತಾತ್ಕಾಲಿಕ, ನಾಳೆ ನಮ್ಮದೇ- ಪ್ರಧಾನಿ ವಾಜಪೇಯಿ
ನವದೆಹಲಿ : ದೇಶದ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಹಿನ್ನಡೆ ತಾತ್ಕಾಲಿಕವಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ಇಟ್ಟಿರುವ ನಂಬಿಕೆ ಹುಸಿಯಾಗದು, ಆಗಬಾರದು ಎಂದು ಪ್ರಧಾನಿ ಎ.ಬಿ.ವಾಜಪೇಯಿ ಹೇಳಿದ್ದಾರೆ.
‘ಬೌದ್ಧಿಕ ಸಮಾಜವಾಗಿ ಭಾರತದ ಅಭಿವೃದ್ಧಿ’ ಎಂಬ ವಿಷಯ ಕುರಿತ ಕಾರ್ಯಪಡೆಯಾಂದರ ವರದಿಯನ್ನು ಪ್ರಸ್ತಾಪಿಸಿ ಗುರುವಾರ ಅವರು ಮಾತಾಡುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಮರ್ಪಕ ಬಳಕೆಯ ಜೊತೆಗೆ ಆರ್ಥಿಕವಾಗಿ ಮೇಲೆ ಬರಲು ಕೂಡ ತಂತ್ರಜ್ಞಾನವನ್ನು ನಾವು ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲೆಲ್ಲಾ ಅಳವಡಿಸಬೇಕು ಎಂದರು.
ಮಾನವ ಸಂಪನ್ಮೂಲ ನಮ್ಮ ಅತ್ಯುತ್ತಮ ಸಂಪತ್ತು. ಅದನ್ನು ಅಭಿವೃದ್ಧಿಯ ಪಥದತ್ತ ಸಾಗಿಸುವ ಚಲನ ಶಕ್ತಿಯಾಗಿ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕು. ಆಗ ನಮ್ಮ ದೇಶದಲ್ಲಿ ಬಡತನ, ನಿರುದ್ಯೋಗ ಸಮಸ್ಯೆಗಳು ನೀಗುತ್ತವೆ. ಅಭಿವೃದ್ಧಿ ಹೊಂದಿರುವ ಉತ್ತಮ ರಾಷ್ಟ್ರ ಭಾರತ ಎಂದು ಜಗತ್ತು ಮಾತಾಡಿಕೊಳ್ಳುತ್ತದೆ ಎಂದು ಪ್ರಧಾನಿ ಕರೆ ಕೊಟ್ಟರು.
ಮಾಹಿತಿ ತಂತ್ರಜ್ಞಾನದಲ್ಲಿ ದೇಶ ಇಟ್ಟಿರುವ, ಇಡುತ್ತಿರುವ ದೂಪುಗಾಲು ನಮ್ಮ ಕಣ್ಣು ತೆರೆಸಿದೆ. ನಮ್ಮಲ್ಲಿರುವ ಪ್ರಚ್ಛನ್ನ ಶಕ್ತಿಗೆ ಆರ್ಥಿಕ ದಿಕ್ಕು ಒದಗಿಸಿದಲ್ಲಿ ಅಭಿವೃದ್ಧಿ ಕಟ್ಟಿಟ್ಟ ಬುತ್ತಿ ಎಂಬುದು ಸಾಬೀತಾಗಿದೆ. ಜ್ಞಾನಾಧಾರಿತ ಆರ್ಥಿಕತೆಗೆ ಭಾರತ ಪ್ರಸ್ತುತದ ಉತ್ತಮ ಉದಾಹರಣೆ ಎಂಬುದು ನಮ್ಮ ಹೆಮ್ಮೆ ಎಂದು ವಾಜಪೇಯಿ ಶ್ಲಾಘಿಸಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications