ಕಾಲಿನಲ್ಲೇ ಎಸ್ಸೆಸ್ಸೆಲ್ಸಿ ಬರೆದ ಸಬಿತಾಗೆ ಅಭಿನಂದನೆಗಳ ಮಹಾಪೂರ
ಬೆಂಗಳೂರು : ಹುಟ್ಟುವಾಗಲೇ ಎರಡೂ ಕೈ ಕಳೆದುಕೊಂಡರೂ ಧೃತಿಗೆಡದೆ ಕಾಲಿನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗುವ ಮೂಲಕ ಯಶೋಗಾಥೆ ಬರೆದ ಸಬಿತಾಳ ಆತ್ಮಾಭಿಮಾನ ಹಾಗೂ ಸಾಹಸವನ್ನು ನಮ್ಮ ಅಸಂಖ್ಯಾತ ಓದುಗರು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.
ಐ.ಎಸ್.ಓ. 9001 ಪ್ರಮಾಣ ಪತ್ರ ಪಡೆದಿರುವ ನಮ್ಮ ಪೋರ್ಟಲ್ನಲ್ಲಿ ಪ್ರಕಟವಾದ ಈ ಸುದ್ದಿಯನ್ನು ಓದಿದ ಅಸಂಖ್ಯಾತ ಓದುಗರು, ಸಬಿತಾಳ ವಿದ್ಯಾಭ್ಯಾಸಕ್ಕೆ ನೆರವಾಗಲೂ ಮುಂದೆ ಬಂದಿದ್ದಾರೆ. ಈ ಧೈರ್ಯಶಾಲಿ ವಿದ್ಯಾರ್ಥಿನಿಗೆ ಸಹಾಯ ಮಾಡಲು, ಆಕೆಯ ಪೂರ್ಣ ಅಂಚೆ ವಿಳಾಸವನ್ನೂ ಕೋರಿದ್ದಾರೆ.
ಪ್ರಚಂಡ ಆತ್ಮವಿಶ್ವಾಸದಿಂದ ತನ್ನ ವಿಕಲಾಂಗತೆಯನ್ನೇ ಮರೆತಿರುವ ಧೀರ ಬಾಲಕಿಯನ್ನು ಅವರ ತಂದೆ ಬೆಸಿಲ್ ಮೋನಿಸಾ ಅವರ ಮೂಲಕ ಸಂಪರ್ಕಿಸಬಹುದು. ವಿಳಾಸ : ಬೆಸಿಲ್ ಮೋನಿಸಾ, ಗರದಡಿ ಹೌಸ್, ಗರದಡಿ ಗ್ರಾಮ, ಬದ್ಯಾರ್, ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ.
ಈಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಸಂಸ್ಥೆಯ ಉಪಾಧ್ಯಕ್ಷ ಮೆಲ್ವಿಲ್ ಪಿಂಟೋ, ಜನಧ್ವನಿ, ಮಂಗಳೂರು - 575002. ಅವರ ಮೂಲಕವೂ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ (0824) 438761 (ಮನೆ), 425490, 423047 (ಕಚೇರಿ), ಫ್ಯಾಕ್ಸ್ - 0824- 425490.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications