ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಸದಸ್ಯ ಸಿದ್ಧರಾಜು ಉಚ್ಛಾಟನೆ

By Staff
|
Google Oneindia Kannada News

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಮೇಲೆ ಕಾಂಗ್ರೆಸ್‌ ಪಕ್ಷದ ವಿಧಾನ ಪರಿಷತ್‌ ಸದಸ್ಯ ಎಂ.ಎಸ್‌. ಸಿದ್ಧರಾಜು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಪಕ್ಷದ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಅವರು ಉಚ್ಛಾಟಿಸಿದ್ದಾರೆ.

ಆಡಳಿತ ಪಕ್ಷದ ಸದಸ್ಯರಾಗಿದ್ದ ಸಿದ್ಧರಾಜು ಅವರು ವಿಧಾನಪರಿಷತ್ತಿನ ಕಾರ್ಯಕಲಾಪಗಳ ಸಂದರ್ಭದಲ್ಲಿ ಹಲವಾರು ಬಾರಿ ಸರ್ಕಾರವನ್ನು ಮುಜುಗರ- ಇಕ್ಕಟ್ಟುಗಳಿಗೆ ಸಿಲುಕಿಸಿದುದನ್ನು ಇಲ್ಲಿ ಸ್ಮರಿಸಬಹುದು. ಈ ಮೊದಲು ಜಾತ್ಯತೀತ ಜನತಾದಳದಿಂದ ಪರಿಷತ್ತಿನ ಸದಸ್ಯರಾಗಿದ್ದ ಅವರು, ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪುನಃ ಸಿದ್ಧರಾಜು ಅವರನ್ನೇ ಕಾಂಗ್ರೆಸ್‌ ಪಕ್ಷ ನಾಮಕರಣ ಮಾಡಿದ್ದು , 2002 ಡಿಸೆಂಬರ್‌ವರೆಗೆ ಅವರ ಅಧಿಕಾರಾವಧಿ ಇದೆ.

ಕಾಂಗ್ರೆಸ್‌ ಪ್ರಜಾಪ್ರಭುತ್ವ ವಿರೋಧಿ : ತಮ್ಮನ್ನು ಕಾಂಗ್ರೆಸ್‌ನಿಂದ ಉಚ್ಛಾಟಿಸಿರುವ ಕ್ರಮವನ್ನು ಸ್ವಾಗತಿಸಿರುವ ಸಿದ್ಧರಾಜು ಅವರು, ಈ ಕ್ರಮದಿಂದಾಗಿ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಉಚ್ಛಾಟನೆಯಿಂದ ತಮ್ಮನ್ನು ರಾಜಕೀಯವಾಗಿ ತುಳಿಯಲು ಸಾಧ್ಯವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿರುವ ಸಿದ್ಧರಾಜು, ಭ್ರಷ್ಟ ವ್ಯವಸ್ಥೆಯಿಂದ ತಮಗೆ ವಿಮೋಚನೆ ದೊರಕಿಸಿರುವ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಹಾಗೂ ಪಕ್ಷದ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X