ಬಳ್ಳಾರಿ:ಡಿಡಿ-2 ಚಾನೆಲ್ ರಿಲೇ ಸೆಂಟರ್‌ಗೆ ಸುಷ್ಮಾರಿಂದ ಕೆಸರು ಕಲ್ಲು
ಬಳ್ಳಾರಿ : ಮುಂದಿನ ವರ್ಷ ವರಲಕ್ಷ್ಮೀ ವ್ರತ ಆಚರಿಸಲು ಬಳ್ಳಾರಿಗೆ ಬರುವ ವೇಳೆಗೆ ಡಿಡಿ ರಿಲೇ ಸೆಂಟರ್ ಕಾರ್ಯನಿರ್ವಹಿಸುವಂತೆ ಮಾಡಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಶನಿವಾರ ನಡೆದ ಕಾರ್ಯಕ್ರಮದಲ್ಲಿ ದೂರದರ್ಶನ್- 2 ಚಾನೆಲ್ ರಿಲೇ ಸೆಂಟರ್‌ಗೆ ಕೆಸರು ಕಲ್ಲು ಹಾಕಿದ ನಂತರ ಮಾತನಾಡುತ್ತಿದ್ದ ಅವರು, ಇನ್ನೊಂದು ವರ್ಷದಲ್ಲಿ ಬಳ್ಳಾರಿಯಲ್ಲಿ ಎಫ್‌ಎಂ ಚಾನೆಲ್ ಆರಂಭಿಸುವ ಭರವಸೆ ನೀಡಿದರು. ನವೆಂಬರ್‌ನಲ್ಲಿ ನಡೆಯುವ ಹಂಪಿ ಉತ್ಸವಕ್ಕೆ ಆಗಮಿಸುವ ಸಂದರ್ಭದಲ್ಲಿ ಎಫ್‌ಎಂ ಸ್ಟೇಷನ್‌ಗೆ ತಾವೇ ಕೆಸರು ಕಲ್ಲು ಹಾಕುವ ಇಂಗಿತವನ್ನು ಸುಷ್ಮಾ ವ್ಯಕ್ತ ಪಡಿಸಿದರು. ಅಂದಹಾಗೆ, ರಾಜ್ಯದಲ್ಲಿ ಬೆಂಗಳೂರಿನ ನಂತರ ಡಿಡಿ ರಿಲೇ ಸೆಂಟರ್ ಹೊಂದಿರುವ ಎರಡನೇ ನಗರ ಎಂಬ ಖ್ಯಾತಿ ಬಳ್ಳಾರಿಗೆ ಸಲ್ಲುತ್ತದೆ.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರತ್ಯೇಕ ಎನ್‌ಡಿಎ ಪ್ಯಾಕೇಜ್‌ನ್ನು ಒದಗಿಸುವುದಾಗಿ ಈಗಾಗಲೇ ಪ್ರಕಟಿಸಿರುವ ಸುಷ್ಮಾ ಸ್ವರಾಜ್- ಈ ನಿಟ್ಟಿನಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅವರೊಂದಿಗೆ ಚರ್ಚಿಸಿದ್ದು, ಮುಖ್ಯಮಂತ್ರಿ ಮತ್ತು ಪ್ರಧಾನಿಯಾಂದಿಗೆ ಮಾತುಕತೆ ನಡೆಸುವುದಾಗಿ ಪುನರುಚ್ಛರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಕೆ.ಸಿ. ಕೊಂಡಯ್ಯ ಬಳ್ಳಾರಿ ಜಿಲ್ಲೆಗೆ ಸುಷ್ಮಾ ಸ್ವರಾಜ್ ತೋರಿದ ಅಕ್ಕರೆಯನ್ನು ಶ್ಲಾಘಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications