ಯಾತ್ರಾಸ್ಥಳಗಳ ಅಭಿವೃದ್ಧಿಗೆ ಮಂಡಳಿ ರಚನೆ : ಅನಂತಕುಮಾರ್
ರಾಯಚೂರು : ಭಾರತದಲ್ಲಿರುವ ಪವಿತ್ರ ಯಾತ್ರಾಸ್ಥಳಗಳ ಹಾಗೂ ತೀರ್ಥಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಶೀಘ್ರವೇ ಮಂಡಳಿಯಾಂದನ್ನು ರಚಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್ ಇಲ್ಲಿ ತಿಳಿಸಿದ್ದಾರೆ.
ಈ ಯೋಜನೆ ಕೇಂದ್ರ ಸರಕಾರದ ಮುಂದಿದ್ದು, ಅತಿ ಶೀಘ್ರವೇ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಇಲ್ಲಿಗೆ ಆಗಮಿಸಿದ್ದ ಸಚಿವರು ತಿಳಿಸಿದರು.
ತುಂಗಭದ್ರಾ ರೈಲು ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಷ್ಟ್ರದ ಎಲ್ಲ ಯಾತ್ರಾಸ್ಥಳಗಳಲ್ಲೂ ಯಾತ್ರಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಖಾಸಗಿ ಸಂಸ್ಥೆಗಳ ಸಹಕಾರವನ್ನು ಪಡೆಯಲಿದೆ ಎಂದರು. ಹಿಂದು, ಮುಸ್ಲಿಮ್, ಕ್ರೆೃಸ್ತ, ಜೈನ, ಬುದ್ಧ ಧರ್ಮೀಯ ಯಾತ್ರಾಸ್ಥಳಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಉತ್ತಮ ಸೌಕರ್ಯ ಕಲ್ಪಿಸಿ, ಪ್ರವಾಸೋದ್ಯಮ ತಾಣಗಳಾಗಿ ಪರಿವರ್ತಿಸಲಾಗುವುದು ಎಂದರು.
ಇದಕ್ಕಾಗಿ ರಾಷ್ಟ್ರೀಯ ಪ್ರವಾಸೋದ್ಯಮ ನಿಧಿ ಸ್ಥಾಪಿಸಿ, ಅಗತ್ಯವಾದ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು. ರಾಷ್ಟ್ರೀಯ ಸಂಸ್ಕೃತಿ ನಿಧಿಯ ವತಿಯಿಂದ ತಾಜ್‌ಮಹಲ್, ಹಂಪಿ, ಕೋನಾರ್ಕ್ ಸೂರ್ಯದೇಗುಲ, ಕುತುಬ್ ಮಿನಾರ್, ಖಜುರಾಹೋ ಮೊದಲಾದ ತಾಣಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅನಂತಕುಮಾರ್ ವಿವರಿಸಿದರು.
ಹಂಪೆಯ ಅಭಿವೃದ್ಧಿಗೆ ಮೊದಲ ಕಂತಿನಲ್ಲಿ 5 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. ಯೋಜಿತ ರೂಪುರೇಷೆಯ ಪ್ರಕಾರ ಇಲ್ಲಿ ಮೂರು ವಸ್ತು ಸಂಗ್ರಹಾಲಯಗಳು ನಿರ್ಮಾಣವಾಗಲಿವೆ. ವಿಶೇಷ ಸ್ಮಾರಕಗಳ ಸುತ್ತ ಉದ್ಯಾನ ಅಭಿವೃದ್ಧಿ ಪಡಿಸುವುದೂ ಈ ಯೋಜನೆಯಲ್ಲಿ ಸೇರಿದೆ ಎಂದು ಅನಂತ್‌ಕುಮಾರ್ ಹೇಳಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications