ಬರಲಿದೆ..ಅಂಚೆಕಚೇರಿ ಸೂರಿನಡಿಯಲ್ಲಿ ಎಟಿಎಂ ಕೌಂಟರ್!
ನವದೆಹಲಿ : ಒಂದೇ ಛಾವಣಿಯಡಿ ವಿವಿಧ ಸೌಲಭ್ಯಗಳನ್ನು ಬಳಕೆದಾರರು ಅಪೇಕ್ಷಿಸುತ್ತಿರುವ ಸಂದರ್ಭದಲ್ಲಿ ಅಂಚೆ ಕಚೇರಿಯ ಅಂಗಳದಲ್ಲಿ ಎಟಿಎಂ (automatic teller machines)ಕೌಂಟರ್ಗಳನ್ನು ಸ್ಥಾಪಿಸುವ ಪ್ರಸ್ತಾವನೆಗಳು ಉಸಿರಾಡುತ್ತಿವೆ. ಕೇಂದ್ರ ಸರ್ಕಾರ ಹ್ಞೂಂ ಅಂದಲ್ಲಿ ಅಂಚೆ ಕಚೇರಿಯಲ್ಲಿ ಎಟಿಎಂ ಒಂದಂಗವಾಗುವ ದಿನ ದೂರವಿಲ್ಲ .
ಅಂಚೆ ಕಚೇರಿಗಳಲ್ಲಿ ಎಟಿಎಂ ಕೌಂಟರ್ಗಳನ್ನು ಸ್ಥಾಪಿಸುವ ಬಗೆಗೆ ಕೆಲವು ಬ್ಯಾಂಕ್ಗಳು ಅಂಚೆ ಇಲಾಖೆಯನ್ನು ಸಂಪರ್ಕಿಸಿರುವುದನ್ನು ಕೇಂದ್ರ ಸಂಪರ್ಕ ಖಾತೆ ರಾಜ್ಯ ಸಚಿವ ಟಪನ್ ಸಿಕ್ದರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ಕುರಿತು ಸರ್ಕಾರವಿನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಅಂಚೆ ಕಚೇರಿಗಳಲ್ಲಿ ಸ್ಥಾಪಿಸಲಾಗುವ ಎಟಿಎಂ ಕೌಂಟರ್ಗಳ ಸಂಖ್ಯೆ ಅಥವಾ ಸ್ಥಳಗಳನ್ನು ಕುರಿತಾದ ಕಾರ್ಯ ಯೋಜನೆ ಇನ್ನೂ ತಯಾರಾಗಿಲ್ಲ . ತಾಂತ್ರಿಕ, ಆರ್ಥಿಕ ಅಂಶಗಳನ್ನು ಪರಿಗಣಿಸಿ ಎಟಿಎಂ ಸ್ಥಾಪನೆಯ ಪ್ರಸ್ತಾವನೆಗಳನ್ನು ನಿರ್ಧರಿಸಲಾಗುವುದು ಎಂದು ಸಿಕ್ದರ್ ಸೋಮವಾರ ಲೋಕಸಭೆಗೆ ಲಿಖಿತ ಹೇಳಿಕೆಯ ಮೂಲಕ ತಿಳಿಸಿದರು.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications