ಆರ್ಥಿಕ ಹಿನ್ನಡೆ : ಏಷ್ಯಾದ 2 ಮಿಲಿಯನ್ ಮಂದಿ ಕೆಲಸಕ್ಕೆ ಕುತ್ತು?
ಸಿಂಗಪೂರ: ವಿಶ್ವಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆಯಿಂದಾಗಿ ಪ್ರಸಕ್ತ ವರ್ಷ ಏಷ್ಯಾದಲ್ಲಿ 2 ಮಿಲಿಯನ್ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಸಿಂಗಪೂರ್ ಪತ್ರಿಕೆಯಾಂದು ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.
ಸಿಂಗಪೂರ್, ಮಲೇಷಿಯಾ, ಥೈಲ್ಯಾಂಡ್, ಫಿಲಿಪೈನ್ಸ್, ಜಪಾನ್, ಇಂಡೋನೇಷಿಯಾ, ಹಾಂಗ್ಕಾಂಗ್, ದಕ್ಷಿಣ ಕೊರಿಯಾ, ಬಾಂಗ್ಲಾದೇಶದ ಸರಕಾರಿ ಅಧಿಕಾರಿಗಳು ನೀಡಿರುವ ಅಂಕಿ ಅಂಶಗಳನ್ನು ಆಧರಿಸಿ ಸಿಂಗಪೂರ್ ಮೂಲದ ಪತ್ರಿಕೆ ನಡೆಸಿರುವ ಸಮೀಕ್ಷೆ ಪ್ರಕಾರ 2ಲಕ್ಷ ಮಂದಿ ಉದ್ಯೋಗ ವಂಚಿತರಾಗುತ್ತಾರೆ.
ಸಮೀಕ್ಷೆಯ ದೃಷ್ಟಿಯಿಂದ ಪತ್ರಿಕೆಯು 21.1 ದಶಲಕ್ಷ ಜನರನ್ನು ಸಂಪರ್ಕಿಸಿ, ಅಭಿಪ್ರಾಯ ಸಂಗ್ರಹಿಸಿದೆ. ಈ ಸಮೀಕ್ಷೆಯ ರೀತ್ಯ ಈಗಷ್ಟೇ ಉದ್ಯೋಗ ಕಳೆದುಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಈ ವರ್ಷದ ಅಂತ್ಯದ ವೇಳೆಗೆ ಏಷ್ಯಾದಲ್ಲಿ ಹತ್ತಿರ ಹತ್ತಿರ 2 ದಶಲಕ್ಷ ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಾರೆ.
ಇದಕ್ಕೆ ಮೂಲ ಕಾರಣ ಏಷ್ಯಾದ ರಫ್ತು ಉತ್ಪನ್ನಗಳಿಗೆ ಅಮೆರಿಕೆಯಲ್ಲಿ ಬೇಡಿಕೆ ಕುಸಿದಿರುವುದೇ ಆಗಿದೆ. ಜಾಗತಿಕ ಮಟ್ಟದಲ್ಲಿ ವಿದ್ಯುನ್ಮಾನ ಕ್ಷೇತ್ರದ ಹಿನ್ನಡೆ, ಆರ್ಥಿಕ ಬದಲಾವಣೆ, ರಾಜಕೀಯ ಅಸ್ಥಿರತೆ ಮೊದಲಾದ ಕಾರಣಗಳೂ ಈ ಉದ್ಯೋಗ ವಂಚನೆಗೆ ಪೂರಕವಾಗಿವೆ ಎಂದಿದೆ ಸಮೀಕ್ಷೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications