ಮೈಸೂರು ದಸರಾ ವಸ್ತು ಪ್ರದರ್ಶನ ಖಾಸಗಿಯವರ ಕೈಗೆ?
ಮೈಸೂರು : ವಿಶ್ವ ಪ್ರಸಿದ್ಧ ಹಾಗೂ ಕರ್ನಾಟಕ ಪರಂಪರೆಯ ದ್ಯೋತಕವಾದ ಮೈಸೂರು ದಸರಾ ವಸ್ತು ಪ್ರದರ್ಶನವನ್ನು ಖಾಸಗಿಯವರಿಗೆ ಒಪ್ಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಕನಿಷ್ಠ 2 ಕೋಟಿ ರೂಪಾಯಿಗಳಿಗೆ ವಸ್ತುಪ್ರದರ್ಶನವನ್ನು ಖಾಸಗಿ ಸಂಸ್ಥೆಗೆ ವಹಿಸಿಕೊಡಲು ರಾಜ್ಯ ವಸ್ತುಪ್ರದರ್ಶನ ಪ್ರಾಧಿಕಾರ ನಿಶ್ಚಯಿಸಿದ್ದು, ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲು ಎಲ್ಲ ರೀತಿಯ ತಯಾರಿ ಮಾಡಲಾಗಿದೆ ಮತ್ತು ಅನಿವಾಸಿ ಭಾರತೀಯರಿಗೂ ಟೆಂಡರಿನ ಬಾಗಿಲು ತೆರೆದಿರುತ್ತದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ನಲ್ಲಿ ನಡೆಯುವ ದಸರಾಕ್ಕೆ ಮುನ್ನ ವಸ್ತು ಪ್ರದರ್ಶನ ನಿರ್ವಹಿಸುವ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಈಗಾಗಲೇ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲು ಬಯಸಿರುವ ಸಣ್ಣಪುಟ್ಟ ಮಳಿಗೆಗಳ ಗುತ್ತಿಗೆಯನ್ನು ರದ್ದು ಪಡಿಸಿ ಹಣ ವಾಪಾಸು ಮಾಡುವಂತೆ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಚಿಸಿದೆ.
ಪ್ರಾಧಿಕಾರವು ಹಿಂದಿನ ಮಳಿಗೆದಾರರಿಂದ ಬಾಕಿ ಹಣವನ್ನು ವಸೂಲು ಮಾಡಲು ಪ್ರಯತ್ನಿಸುತ್ತಿರುವ ಈ ಸಂದರ್ಭದಲ್ಲಿ ಸರಕಾರದಿಂದ ಈ ರೀತಿಯ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಸರಕಾರದ ಈ ನಿರ್ಧಾರಕ್ಕೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಪುಟ್ಟಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications