ಮಂಡ್ಯದಿಂದ ನೇಪಾಳಕ್ಕೆ 2.15 ಕೋಟಿ ರು.ಮೌಲ್ಯದ ಹಾಲಿನ ಪುಡಿ
ಮಂಡ್ಯ : ನೇಪಾಳದ ಮಿಲ್ಕ್ ಡೈರಿ ಡೆವಲಪ್ಮೆಂಟ್ ಕಾರ್ಪೊರೇಷನ್ನೊಂದಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಮಾಡಿಕೊಂಡಿರುವ ಒಪ್ಪಂದದ ಅನುಸಾರ 150 ಟನ್ ಹಾಲಿನ ಪುಡಿ ಸೋಮವಾರ ಮಂಡ್ಯದಿಂದ ನೇಪಾಳಕ್ಕೆ ಪ್ರಯಾಣ ಬೆಳೆಸಿತು. ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಕಳುಹಿಸಿರುವ ಈ ಹಾಲಿನ ಪುಡಿ ಚೀಲಗಳನ್ನು ತುಂಬಿದ್ದ ಲಾರಿಗಳಿಗೆ ಒಕ್ಕೂಟದ ಅಧ್ಯಕ್ಷ ಜವರೇಗೌಡ ಹಸಿರು ನಿಶಾನೆ ತೋರಿಸಿದರು.
ದೇಶದಲ್ಲಿ ಇದೇ ಮೊದಲ ಬಾರಿಗೆ ವಿದೇಶಕ್ಕೆ ಹಾಲಿನ ಉತ್ಪನ್ನವನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರಫ್ತು ಮಾಡಿದೆ. ಕಳೆದ ತಿಂಗಳು 150 ಟನ್ ಹಾಲಿನ ಪುಡಿಯನ್ನು ಕಳುಹಿಸಲಾಗಿದ್ದು , ಪ್ರಸ್ತುತ ರಫ್ತಿನಿಂದಾಗಿ ಒಟ್ಟು 300 ಟನ್ ಹಾಲಿನ ಪುಡಿಯನ್ನು ನೇಪಾಳಕ್ಕೆ ಕಳುಹಿಸಿದಂತಾಗಿದೆ.
ನೇಪಾಳಕ್ಕೆ ಸರಬರಾಜು ಮಾಡಿರುವ ಹಾಲಿನ ಪುಡಿಯ ಬೆಲೆಯನ್ನು ಪ್ರತಿ ಕಿಲೋ ಒಂದಕ್ಕೆ 75 ರುಪಾಯಿ ನಿಗದಿ ಪಡಿಸಿದ್ದು, ಒಟ್ಟು 2.15 ಕೋಟಿ ರುಪಾಯಿ ಮೌಲ್ಯದ ಹಾಲಿನ ಪುಡಿ ಕಳುಹಿಸಲಾಗಿದೆ ಎಂದು ಜವರೇಗೌಡ ಹೇಳಿದರು. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಂದಿನ ಉತ್ಪನ್ನ ಹೊರರಾಷ್ಟ್ರಕ್ಕೆ ಸಾಗಿಸಲಾಗುತ್ತಿದೆ ಎಂದು ಅವರು ಹರ್ಷಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications