3 ವರ್ಷದಲ್ಲಿ 33 ಜವಳಿ ಕಾರ್ಖಾನೆಗೆ ಬೀಗ; 23,000 ಕಾರ್ಮಿಕರು ಮನೆಗೆ
ನವದೆಹಲಿ : ರಾಷ್ಟ್ರದ ಜವಳಿ ಉದ್ಯಮ ಭಾರಿ ಸಂಕಷ್ಟ ಎದುರಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಭಾರಿ ಹಿನ್ನಡೆಯನ್ನು ಅನುಭವಿಸಿದ ಜವಳಿ ಕ್ಷೇತ್ರದಲ್ಲಿ 33 ಕೈಗಾರಿಕೆಗಳು ಬಾಗಿಲು ಹಾಕಿವೆ. ಇದರಿಂದಾಗಿ ಸುಮಾರು 23 ಸಾವಿರ ಕಾರ್ಮಿಕರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ.
ಆರ್ಥಿಕ ಆಘಾತದಿಂದಾಗಿ 98-99ರ ಮೇ ಮತ್ತು ಜೂನ್ ತಿಂಗಳಿನಲ್ಲಿ 13 ಕೈಗಾರಿಕೆಗಳು, 99-2000ದ ಮೇ-ಜೂನ್ನಲ್ಲಿ 14 ಕೈಗಾರಿಕೆಗಳು ಹಾಗೂ 2000-01ನೇ ಮೇ ಹಾಗೂ ಜೂನ್ ತಿಂಗಳಲ್ಲಿ 6 ಕಾರ್ಖಾನೆಗಳು ಬಾಗಿಲು ಮುಚ್ಚಿವೆ.
ಈ 33 ಕಂಪನಿಗಳು ಕೈಗಾರಿಕೆ ಮತ್ತು ಆರ್ಥಿಕ ಪುನರ್ ನಿರ್ಮಾಣ ಮಂಡಳಿ (ಬಿಐಎಫ್ಆರ್)ನಲ್ಲಿ ತಮ್ಮ ಹೆಸರು ದಾಖಲಿಸಿ, ಇನ್ನೂ ಆಶಾಭಾವನೆಯಿಂದ ಕಾಯುತ್ತಿವೆ. ಕೇಂದ್ರ ಜವಳಿ ಸಚಿವಾಲಯದ ಅಂಕಿ ಅಂಶಗಳ ರೀತ್ಯ ತಮಿಳುನಾಡಿನ ಜವಳಿ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಇತ್ತಿಚೆಗೆ ಬಾಗಿಲು ಹಾಕಿದ ಕೈಗಾರಿಕೆಗಳ ಪೈಕಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ.
ತಮಿಳುನಾಡಿನ ಸುಮಾರು 4 ಸಾವಿರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಉದಾರೀಕರಣ ನೀತಿ, ಕಾರ್ಮಿಕರ ಸಮಸ್ಯೆ, ಆರ್ಥಿಕ ಸಂಕಷ್ಟವೇ ಕೈಗಾರಿಕೆಗಳು ಮುಚ್ಚಲು ಕಾರಣವಾಗಿದೆ. ಆಂಧ್ರಪ್ರದೇಶದ ಐದು, ಮಹಾರಾಷ್ಟ್ರದ 4 ಜವಳಿ ಉದ್ದಿಮೆಗಳು ಬಾಗಿಲು ಮುಚ್ಚಿವೆ. ಮಿನರ್ವಾ ಮಿಲ್ ಸೇರಿದಂತೆ ಕರ್ನಾಟಕದ ಹಲವು ಜವಳಿ ಉದ್ದಿಮೆಗಳು ಸಂಕಷ್ಟದಲ್ಲಿವೆ.
ಬಿಹಾರ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಕೂಡ ಕಾರ್ಖಾನೆಗಳು ಮುಚ್ಚಿದ್ದು ತಲಾ 3 ಸಾವಿರ ಕಾರ್ಮಿಕರು ಕೆಲಸ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications