ಬಿ.ಆರ್. ಹಿಲ್ಸ್ ಅರಣ್ಯದಲ್ಲಿ ಜೂನ್ ತಿಂಗಳಲ್ಲಿ 12 ಆನೆಗಳ ಸಾವು
ಬೆಂಗಳೂರು : ಬಿಳಿಗಿರಿರಂಗನ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಜೂನ್ ತಿಂಗಳ ಅವಧಿಯಲ್ಲಿ 12 ಆನೆಗಳು ಸಾವಿಗೀಡಾಗಿವೆ. ಈ ವಿಷಯವನ್ನು ಕರ್ನಾಟಕ ವನ ಸಂವರ್ಧನ ಟ್ರಸ್ಟ್ ಬಹಿರಂಗಪಡಿಸಿದೆ. ಭಾರತದ ಭವ್ಯ ಪರಂಪರೆಯ ಅವಿಭಾಜ್ಯ ಅಂಗವಾದ ಆನೆಗಳ ಸಂತತಿ ದಿನೇ ದಿನೇ ಕ್ಷೀಣಿಸುತ್ತಿರುವ ಬಗ್ಗೆ ಟ್ರಸ್ಟ್ ದುಃಖ ವ್ಯಕ್ತಪಡಿಸಿದೆ.
ವನ ಸಂವರ್ಧನ ಟ್ರಸ್ಟ್ ಕಾರ್ಯದರ್ಶಿಯೂ ಆಗಿರುವ ಅರಣ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಎ.ಎನ್. ಯಲ್ಲಪ್ಪರೆಡ್ಡಿ ಅವರು, ಆನೆಗಳ ಸಂತತಿಯ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ಖಂಡಿಸಿದ್ದಾರೆ. ಜೂನ್‌ನಲ್ಲಿ 12 ಆನೆಗಳು ಸತ್ತಿರುವ ಹಿನ್ನೆಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಚಾಮರಾಜನಗರ ಹಾಗೂ ಸುತ್ತಮುತ್ತಲ 35 ಗ್ರಾಮಗಳಲ್ಲಿ ಜನಜಾಗೃತಿ ಸಭೆಯನ್ನು ಏರ್ಪಡಿಸಿವೆ ಎಂದೂ ತಿಳಿಸಿದ್ದಾರೆ.
ಈ ಸಭೆಗೆ ವಿಭಾಗಾಧಿಕಾರಿಗಳು, ಚಾಮರಾಜನಗರ ಜಿಲ್ಲಾಧಿಕಾರಿಗಳು, ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಬೇಳೆ ಹಾನಿ ತಡೆಯಲು ರೈತರು ತಮ್ಮ ಹೊಲ, ಗದ್ದೆಗಳಿಗೆ ವಿದ್ಯುತ್ ತಂತಿ ಹಾಕಿರುವುದೂ ಆನೆಗಳ ಸಾವಿಗೆ ಒಂದು ಕಾರಣವಾಗಿದೆ ಎಂದು ಯಲ್ಲಪ್ಪ ರೆಡ್ಡಿ ಹೇಳಿದ್ದಾರೆ.
ಕೊಳ್ಳೆಗಾಲ ಬಳಿಯ ಯಳಂದೂರು ಗ್ರಾಮದ ಕರುಣಾ ಟ್ರಸ್ಟ್‌ನಲ್ಲಿ ಆಗಸ್ಟ್ 16ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಜನಜಾಗೃತಿ ಸಭೆ ನಡೆಯಲಿದೆ. ಪ್ರಸ್ತುತ ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಲ್ಲಿ ಆನೆಗಳ ಸಂತತಿ ನಿರ್ಮಾಮವಾಗಿದೆ ಎಂದು ರೆಡ್ಡಿ ಅವರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications