Get Updates
Get notified of breaking news, exclusive insights, and must-see stories!

ಧಾರವಾಡದಲ್ಲಿ ಐಐಟಿ: ಪ್ರಧಾನಿಗೆ ರಾಜ್ಯದ ನಾಯಕರ ಮನವಿ

ನವದೆಹಲಿ : ಕರ್ನಾಟಕದ ಧಾರವಾಡದಲ್ಲಿ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಸಂಸ್ಥೆಯನ್ನು ಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯದ ಪ್ರಮುಖ ಧುರೀಣರು ಪ್ರಧಾನಿ ವಾಜಪೇಯಿ ಅವರಿಗೆ ಮನವಿ ಮಾಡಿದ್ದಾರೆ.

ಪ್ರತಿ ಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌, ಸಂಸದ ಐ.ಜಿ. ಸನದಿ, ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಬೊಮ್ಮಾಯಿ ಮತ್ತು ಬಸವರಾಜ ಹೊರಟ್ಟಿ ಅವರುಗಳು ಪ್ರಧಾನಿಗೆ ಮನವಿ ಸಲ್ಲಿಸಿದ್ದು , ಧಾರವಾಡದಲ್ಲಿ ಐಐಟಿ ಸ್ಥಾಪಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಸಮಿತಿಯ ಮುಖ್ಯಸ್ಥರಾದ ಪ್ರೊ.ಯು.ಆರ್‌.ರಾವ್‌ ಅವರು ಕೂಡ ಧಾರವಾಡದಲ್ಲಿ ಐಐಟಿ ಸ್ಥಾಪನೆಗೆ ಒಲವು ತೋರಿಸಿದ್ದನ್ನು ಈ ಧುರೀಣರು ಪ್ರಧಾನಿಯವರ ಗಮನಕ್ಕೆ ತಂದಿದ್ದಾರೆ.

ಧಾರವಾಡದಲ್ಲಿ ಐಐಟಿ ಸ್ಥಾಪನೆಗೆ ಭೂಮಿ ಹಾಗೂ ಉಚಿತ ವಿದ್ಯುತ್‌ ಮತ್ತು ನೀರನ್ನು ಒದಗಿಸುವ ಭರವಸೆಯನ್ನು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ನೀಡಿದ್ದಾರೆ. ಧಾರವಾಡದಲ್ಲಿ ಐಐಟಿ ಸ್ಥಾಪನೆಯಿಂದಾಗಿ ಮಹಾರಾಷ್ಟ್ರ ಹಾಗೂ ಗೋವಾದ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎಂದು ರಾಜ್ಯದ ಧುರೀಣರು ಅಭಿಪ್ರಾಯ ಪಟ್ಟಿದ್ದಾರೆ.

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+