ಇಂಟೆಲ್‌ನಿಂದ ರಾಜ್ಯದ ಶಾಲಾ ಶಿಕ್ಷಕರಿಗೆ ವಿಶೇಷ ತರಬೇತಿ ಯೋಜನೆ
ನವದೆಹಲಿ : ತಂತ್ರಜ್ಞಾನದ ಬಳಕೆಯ ಮೂಲಕ ಬೋಧನೆ ಹಾಗೂ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕದ ಶಾಲಾ ಶಿಕ್ಷಕರಿಗೆ ತರಬೇತಿ ನೀಡುವ ವಿಶೇಷ ಯೋಜನೆಯಾಂದನ್ನು ‘ಇಂಟೆಲ್ ಏಷ್ಯಾ ಅಂಡ್ ಡೈರೆಕ್ಟೊರೇಟ್ ಆಫ್ ಸ್ಟೇಟ್ ಎಜುಕೇಶನ್ ಅಂಡ್ ರಿಸರ್ಚ್ ಟ್ರೆೃನಿಂಗ್’ (ಡಿಎಸ್‌ಇಆರ್‌ಟಿ) ಗುರುವಾರ ಪ್ರಕಟಿಸಿದೆ.
ಇಂಟೆಲ್‌ನ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕ್ರೆಗ್ ಬ್ಯಾರೆಟ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಡುವೆ ಗುರುವಾರ ನಡೆದ ಮಾತುಕತೆಯ ನಂತರ ಈ ಯೋಜನೆಯನ್ನು ಪ್ರಕಟಿಸಲಾಯಿತು. ರಾಜ್ಯದ 7 ಸಾವಿರ ಶಿಕ್ಷಕರು ಈ ಯೋಜನೆಯಡಿ ತರಬೇತಿ ಪಡೆಯಲಿದ್ದಾರೆ.
ಬಂಡವಾಳವನ್ನು ಹೂಡಲು ಸಿದ್ಧವಾಗಿರುವ ಇಂಟೆಲ್‌ಗೆ ರಾಜ್ಯದ ಸ್ವಾಗತವಿದೆ. ಮಿಲೆನಿಯಂ ಐಟಿ ನೀತಿ ಮಾಹಿತಿ ಅನ್ವಯ ಈಗಾಗಲೇ ಈ ಯೋಜನೆಗೆ ರಾಜ್ಯ ಸರ್ಕಾರ ಹಲವಾರು ರಿಯಾಯಿತಿ- ಸೌಲಭ್ಯಗಳನ್ನು ನೀಡಲಾಗಿದೆ ಎಂದು ಯೋಜನೆಯನ್ನು ಪ್ರಕಟಿಸಿದ ನಂತರ ಕೃಷ್ಣ ಹೇಳಿದರು.
ಸಮಾಜದ ಕನಿಷ್ಠನವರೆಗೆ ಹಾಗೂ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗೂ ಮಾಹಿತಿ ತಂತ್ರಜ್ಞಾನವನ್ನು ಒಯ್ಯುವ ಮಹತ್ವಾಕಾಂಕ್ಷೆಯನ್ನು ಮುಖ್ಯಮಂತ್ರಿ ಕೃಷ್ಣ ಹೊಂದಿದ್ದು , ಪ್ರಸಕ್ತ ಇಂಟೆಲ್ ಸಹಯೋಗದ ಯೋಜನೆ ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆಂದು ನಂಬಲಾಗಿದೆ.
ಈ ಯೋಜನೆಯಡಿಯಲ್ಲಿ ಇಂಟೆಲ್ ಈಗಾಗಲೇ ಭಾರತದ 15 ನಗರಗಳ ಸುಮಾರು 28 ಸಾವಿರ ಶಿಕ್ಷಕರಿಗೆ ತರಬೇತಿ ನೀಡಿದೆ. 2002 ಇಸವಿಯಾಳಗೆ 20 ದೇಶಗಳ 4 ಲಕ್ಷ ಶಿಕ್ಷಕರಿಗೆ ತರಬೇತಿ ನೀಡುವ ಉದ್ದೇಶವನ್ನು ಇಂಟೆಲ್ ಹೊಂದಿದೆ.
ಬೆಂಗಳೂರಿನಿಂದ ಇಂಟೆಲ್ ಚಟುವಟಿಕೆಗಳು
ಶಾಲಾಕೊಠಡಿಗಳಲ್ಲಿ ಕಂಪ್ಯೂಟರ್ ತಂತ್ರಜ್ಞಾನ ಬಳಕೆಯ ರಾಜ್ಯ ಸರ್ಕಾರದ ದೃಷ್ಟಿಕೋನವನ್ನು ನಾವು ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದ ಬ್ಯಾರೆಟ್, ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದ ಸಾಧ್ಯತೆಗಳನ್ನು ವಿಸ್ತರಿಸುವ ಕುರಿತು ಆಶಾಭಾವನೆ ವ್ಯಕ್ತಪಡಿಸಿದರು.
ಮುಂದಿನ ವರ್ಷದ ಮಧ್ಯಭಾಗದಲ್ಲಿ ಇಂಟೆಲ್ ತನ್ನ ವಿನ್ಯಾಸ ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳುತ್ತದೆ. 26 ಮಿಲಿಯನ್ ಡಾಲರ್‌ಗಳ ಈ ಚಟುವಟಿಕೆಗೆ 2 ಲಕ್ಷ ಚದರ ಅಡಿ ಭೂಮಿ ಅಗತ್ಯವಾಗಿದೆ. ಪ್ರಸ್ತುತ ಇಂಟೆಲ್ ಇಂಡಿಯಾ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ 500 ಇಂಜಿನಿಯರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬ್ಯಾರೆಟ್ ಹೇಳಿದರು.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications