ಟಿಎಸ್ಸೆರ್ ಪ್ರಶಸ್ತಿ ವಿಜೇತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ನಿಧನ
ಉಡುಪಿ : ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಗುರುವಾರ ಬೆಳಗ್ಗೆ 1-30ರಲ್ಲಿ ಉಡುಪಿ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಸಮಕಾಲೀನ ಪತ್ರಿಕೋದ್ಯಮವನ್ನು ಸಮಾಜ ಶಾಸ್ತ್ರೀಯ ದೃಷ್ಟಿ ಕೋನದಿಂದ ನಡೆಸಿದ್ದ ರಘುರಾಮ ಶೆಟ್ಟರು ಮಂಗಳೂರಿನ ನವಭಾರತ ಪತ್ರಿಕೆಯಿಂದ ತಮ್ಮ ವೃತ್ತಿ ಜೀವನ ಆರಂಭಿಸಿ, ಪ್ರಜಾವಾಣಿ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ಆನಂತರ ‘ಮುಂಗಾರು’ ಎಂಬ ತಮ್ಮದೆ ಆದ ಸ್ವಂತ ದಿನಪತ್ರಿಕೆ ಪ್ರಾರಂಭಿಸಿ ರೈತರು ಹಾಗೂ ದುರ್ಬಲ ವರ್ಗದವರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಹೋರಾಡಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಗೌರವಿಸಿ, ಕರ್ನಾಟಕ ಸರಕಾರ ಅವರಿಗೆ 1999ರ ಸಾಲಿನ ಪ್ರತಿಷ್ಠಿತ ಟಿಎಸ್ಸೆರ್ ಪ್ರಶಸ್ತಿ ನೀಡಿ ಗೌರವಿಸಿತ್ತು. ರಘುರಾಮ ಶೆಟ್ಟರು ಪತ್ರಿಕಾ ಅಕಾಡಮಿ ಪ್ರಶಸ್ತಿ , ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೇ ಮೊದಲಾದ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
ಸಂತಾಪ : ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಸಂತಾಪ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications