ಕೊಲಂಬೊದಲ್ಲಿ ಭಾರತ- ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಸಭೆ
ಕೊಲಂಬೊ: ಭಾರತ ಹಾಗೂ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳ ನಡುವಣ ಮಾತುಕತೆ ಶುಕ್ರವಾರ ಇಲ್ಲಿ ಪ್ರಾರಂಭವಾಗಿದ್ದು , ಈ ಮಾತುಕತೆಗಳನ್ನು ವಿಫಲ ಆಗ್ರಾ ಶೃಂಗಸಭೆಯ ಮುಂದುವರಿದ ಭಾಗ ಎಂದು ಬಣ್ಣಿಸಲಾಗಿದೆ.
ದಕ್ಷಿಣ ಏಷ್ಯನ್ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಪ್ರಸ್ತುತ ಕೊಲಂಬೊದಲ್ಲಿ ನೆರೆದಿದ್ದು , ಈ ಸಂದರ್ಭದಲ್ಲಿ ಭಾರತ- ಪಾಕ್ ವಿದೇಶಾಂಗ ಕಾರ್ಯದರ್ಶಿಗಳು ಉಭಯ ದೇಶಗಳ ನಡುವಣ ಭಿನ್ನಾಭಿಪ್ರಾಯವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಭಾರತದ ತಂಡವನ್ನು ವಿದೇಶಾಂಗ ಕಾರ್ಯದರ್ಶಿ ಚೋಕಿಲಾ ಅಯ್ಯರ್ ವಹಿಸಿದ್ದರೆ, ಪಾಕ್ ವಿದೇಶಾಂಗ ಕಾರ್ಯದರ್ಶಿ ಇನಾಮುಲ್ ಹಕ್ ಪಾಕ್ ತಂಡದ ಮುಂದಾಳಾಗಿದ್ದಾರೆ.
ಭಾರತೀಯ ಸ್ವಾಮ್ಯದ ‘ತಾಜ್ ಸಮುದ್ರ’ ಹೊಟೇಲ್ನಲ್ಲಿ ಚೋಕಿಲಾ ಹಾಗೂ ಇನಾಮುಲ್ ಅವರ ನಡುವಣ ಮುಚ್ಚಿದ ಬಾಗಿಲ ಮಾತುಕತೆ ಪ್ರಾರಂಭವಾಗುವ ಮುನ್ನ , ಇಬ್ಬರು ನಾಯಕರು ಪರಸ್ಪರ ಕೈ ಕುಲುಕುವ ಮೂಲಕ ಫೋಟೋಗ್ರಾಫರ್ಗಳಿಗೆ ಪೋಸ್ ನೀಡಿದರು.
(ಏಜೆನ್ಸೀಸ್)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications