ರಾಜ್ಯ ತುಳು ಅಕಾಡೆಮಿ ಮುಚ್ಚುವುದಕ್ಕೆತುಳುಕೂಟದ ವಿರೋಧ
ಮಂಗಳೂರು : ತುಳು ಒಕ್ಕೂಟದ ಧುರೀಣರಾದ ದಾಮೋದರ್ ನಿಸರ್ಗ, ಚಂದ್ರಶೇಖರ್ ಶೆಟ್ಟಿ ಮತ್ತಿತರರು ರಾಜ್ಯ ತುಳು ಅಕಾಡೆಮಿಯನ್ನು ಮುಚ್ಚುವ ಪ್ರಸ್ತಾವವನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ತುಳು ಅಕಾಡೆಮಿ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ. ತುಳು ಜಾನಪದ ಕಲೆ ಮತ್ತು ಸಾಹಿತ್ಯವನ್ನು ಪ್ರೋತ್ಸಾಹಿಸುವುದರ ಜೊತೆಗೆ ಕನ್ನಡ ಸಾಹಿತ್ಯ ಅಭಿವೃದ್ಧಿಗೂ ಶ್ರಮಿಸುತ್ತಿದೆ. ಅಂತಹ ಅಕಾಡೆಮಿಯನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ತುಳುಕೂಟದ ಹಿರಿಯರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಮುನ್ಸೂಚನೆ, ಅಥವಾ ಕಾರಣಗಳಿಲ್ಲದೆ ತುಳು ಅಕಾಡೆಮಿಯನ್ನು ಮುಚ್ಚುವ ಪ್ರಸ್ತಾಪ ವ್ಯಕ್ತವಾಗಿರುವುದು ಕರಾವಳಿ ಮತ್ತು ರಾಜ್ಯದ 30 ಲಕ್ಷ ತುಳುವರಿಗೆ ಶಾಕ್ ನೀಡಿದೆ. ಕಳೆದ ಆರು ವರ್ಷಗಳಿಂದ ಪ್ರಾಚೀನ ತುಳು ಸಂಸ್ಕೃತಿ ಮತ್ತು ಜನ ಜೀವನದ ಬಗೆಗೆ ಒಂದಲ್ಲ ಒಂದು ರೀತಿಯಲ್ಲಿ ಅಧ್ಯಯನ ನಡೆಸುತ್ತಾ ಬಂದಿರುವ ಅಕಾಡೆಮಿಯನ್ನು ಪ್ರೋತ್ಸಾಹಿಸುವ ಬದಲು ಶಾಸಕಾಂಗ ಸಮಿತಿ ಮುಚ್ಚಲು ಸಲಹೆ ಮಾಡಿರುವುದು ಸರಿಯಲ್ಲ ಎಂದು ತುಳು ಕೂಟ ಅಭಿಪ್ರಾಯ ಪಟ್ಟಿದೆ.
ಸಮಿತಿಯ ಸಲಹೆಯನ್ನು ಕಣ್ಣು ಮುಚ್ಚಿ ಒಪ್ಪಿಕೊಳ್ಳದೇ, ಸರಕಾರವು ತುಳು ಅಕಾಡೆಮಿಯ ಕೆಲಸ ಕಾರ್ಯಗಳನ್ನು ಮರುಪರಿಶೀಲಿಸಿ ಅಕಾಡೆಮಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು ಎಂದು ತುಳುಕೂಟದ ಮುಂದಾಳುಗಳು ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications