20ರಿಂದ ಬರ ಪರಿಹಾರ ಕಾಮಗಾರಿ ವೀಕ್ಷಣೆಗೆಮುಖ್ಯಮಂತ್ರಿ ಪ್ರವಾಸ
ಬೆಂಗಳೂರು : ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲು ಹಾಗೂ ಬರಗಾಲದಿಂದ ಉಂಟಾಗಿರುವ ಸಮಸ್ಯೆಗಳನ್ನು ಎದುರಿಸಲು, ಸರ್ವ ಪಕ್ಷ ನಾಯಕರನ್ನೊಳಗೊಂಡ ಪರಿಹಾರ ಸಮಿತಿ ರಚಿಸುವ ಅಗತ್ಯ ಇಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರದ ಬಗ್ಗೆ ಸ್ವತಃ ತಾವೇ ತೀವ್ರ ನಿಗಾ ವಹಿಸಿದ್ದು, ಪ್ರತ್ಯೇಕ ಸಮಿತಿ ರಚಿಸುವ ಅಗತ್ಯ ಇಲ್ಲ ಎಂದರು. ಆಗಸ್ಟ್ 20ರಿಂದ ಬರಗಾಲ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಅವರು ತಿಳಿಸಿದರು.
20ರಂದು ದಾವಣಗೆರೆ, ಆನಂತರ ಬೀದರ್, ಗುಲ್ಬರ್ಗಾ ಹಾಗೂ ರಾಯಚೂರಿನಲ್ಲಿ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ ಕೃಷ್ಣ, ಬಿ.ಜೆ.ಪಿ. ಒತ್ತಾಯಿಸಿರುವಂತೆ ಬರ ಪರಿಹಾರ ಉಸ್ತುವಾರಿ ಸಮಿತಿಯಾಂದನ್ನು ರಚಿಸುವ ಅಗತ್ಯವೇ ಇಲ್ಲ ಎಂದು ಹೇಳಿದರು.
ಆಗ್ರಹ : ರಾಜ್ಯ ಎದುರಿಸುತ್ತಿರುವ ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ, ತಾಲೂಕು ಮಟ್ಟದಲ್ಲಿ ಸರ್ವ ಪಕ್ಷಗಳ ಬರ ಪರಿಹಾರ ಸಮಿತಿಯಾಂದನ್ನು ರಚಿಸಿ, ಬರ ಪರಿಹಾರ ಕಾಮಗಾರಿಗಳ ಉಸ್ತುವಾರಿಯನ್ನು ಆ ಸಮಿತಿಗೆ ಒಪ್ಪಿಸಬೇಕು ಎಂದು ಶನಿವಾರ ಗುಲ್ಬರ್ಗಾದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಆಗ್ರಹಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
ಈ ಮಧ್ಯೆ ಕೇಂದ್ರ ಸರಕಾರ ರಾಜ್ಯದ ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಾಕಷ್ಟು ನೆರವು ನೀಡಿದ್ದು, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರ ಇನ್ನು ಹೆಚ್ಚಿನ ನೆರವನ್ನು ಕೇಂದ್ರದಿಂದ ಬಯಸಬಾರದು ಎಂದು ಕೇಂದ್ರದ ಮತ್ತೊಬ್ಬ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications