ತೀರ್ಥೋದ್ಭವದ ಕಾತರದಲ್ಲಿ ತಲಕಾವೇರಿ
ಮಡಿಕೇರಿ : ಈ ವರ್ಷದ ಕಾವೇರಿ ತೀರ್ಥೋದ್ಭವ ಅಕ್ಟೋಬರ್ 17ರ ತುಲಾ ಸಂಕ್ರಮಣದಂದು ತಲಕಾವೇರಿಯಲ್ಲಿ ನಡೆಯಲಿದ್ದು , ಕೊಡಗು ಜಿಲ್ಲಾಡಳಿತ ಜಾತ್ರೆಗೆ ಸರ್ವ ಸಿದ್ಧತೆಯನ್ನೂ ಮಾಡುತ್ತಿದೆ.
ಕಾವೇರಿ ತೀರ್ಥೋತ್ಭವದಂದು ರಾಜ್ಯಾದ್ಯಂತದಿಂದ ಅಸಂಖ್ಯ ಭಕ್ತರು ಕೊಡಗಿಗೆ ಆಗಮಿಸಲಿದ್ದಾರೆ. ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಈಗಾಗಲೇ ವಹಿಸಿಕೊಡಲಾಗಿದೆ. ಅಕ್ಟೋಬರ್ 16ರಿಂದ 18ರವರೆಗೆ ತಲಕಾವೇರಿ ದೇವಸ್ಥಾನದಲ್ಲಿ ಉತ್ಸವ ನಡೆಯಲಿದ್ದು ಈ ಎರಡು ದಿನಗಳಲ್ಲಿ ಭಾಗಮಂಡಲ ಮತ್ತು ತಲಕಾವೇರಿ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉತ್ಸವದ ನೆಪದಲ್ಲಿ ಮಡಿಕೇರಿ ರಸ್ತೆಗಳು ರಿಪೇರಿಯಾಗುತ್ತಿವೆ. ಸೇತುವೆಗಳು ಸುಣ್ಣ ಬಣ್ಣ ಕಾಣುತ್ತಿವೆ. ಬಸ್ ಸ್ಟ್ಯಾಂಡ್‌ಗಳಿಗೆ ಛಾವಣಿ ಹೊದೆಸಲಾಗುತ್ತಿದೆ. ಉತ್ಸವದ ಸಮಯದಲ್ಲಿ , ತಲಕಾವೇರಿಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲು ಜಿಲ್ಲಾಧಿಕಾರಿಗಳು ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ಗಳು ಮತ್ತು ಹೊಟೇಲುಗಳು ಬಳಸುವ ನೀರು ಮತ್ತು ಆಹಾರದ ಸ್ವಚ್ಛತೆಯನ್ನು ಜಿಲ್ಲಾಡಳಿತದ ಸಮಿತಿ ಪರೀಕ್ಷಿಸುತ್ತಿದೆ.
ಜಿಲ್ಲಾ ಪಂಚಾಯತ್‌ನ ಇಂಜಿನಿಯರಿಂಗ್ ವಿಭಾಗವು ಯಾತ್ರಿಗಳಿಗಾಗಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದೆ. ಕುಡಿಯುವ ನೀರು, ವಿದ್ಯುತ್ ಸರಬರಾಜಿನ ಸಮರ್ಪಕತೆಯ ಜೊತೆಗೆ ಭಕ್ತರನ್ನು ಸ್ವಾಗತಿಸಲು ಬ್ಯಾನರು, ಪೋಸ್ಟರುಗಳೂ ಸಿದ್ಧವಾಗಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉತ್ಸವದ ದಿನಗಳಲ್ಲಿ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಿದೆ.
ಕನ್ನಡ ಮತ್ತು ಸಂಸ್ಕೃತಿ ವಿಭಾಗವು ತೀರ್ಥೋದ್ಭವ ಜಾತ್ರೆಯ ದಿನಗಳಲ್ಲಿ ಪ್ರತಿ ದಿನ ಸಂಜೆ 6ರಿಂದ 10 ಗಂಟೆವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರೆಡಿಯಾಗುತ್ತಿದೆ. ಕೊಡಗಿನ ನೂತನ ಜಿಲ್ಲಾಧಿಕಾರಿ ರಾಮಚಂದ್ರ ಅವರು ತಾವೇ ಸ್ವತಃ ತೀರ್ಥೋತ್ಭವ ಜಾತ್ರೆ ನಿರ್ವಹಣೆಯ ಉಸ್ತುವಾರಿ ವಹಿಸುವುದಾಗಿ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications