ಕೃಷ್ಣ ಕಣಿವೆ ಅಕ್ರಮ ನೀರಾವರಿ ಕಾಮಗಾರಿ : ಆಂಧ್ರಕ್ಕೆ ನೋಟಿಸ್
ನವದೆಹಲಿ : ಆಂಧ್ರಪ್ರದೇಶ ಸರಕಾರ ಕೃಷ್ಣ ಕಣಿವೆಯಲ್ಲಿ ಕೈಗೊಂಡಿರುವ ಐದು ಅಕ್ರಮ ನೀರಾವರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಸರ್ವೋನ್ನತ ನ್ಯಾಯಾಲಯವು ಕೇಂದ್ರ ಹಾಗೂ ಆಂಧ್ರಪ್ರದೇಶ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಆಂಧ್ರಪ್ರದೇಶ ಸರಕಾರ ಕೃಷ್ಣ ನದಿ ಕೊಳ್ಳದಲ್ಲಿ ಅಕ್ರಮವಾಗಿ ಕೈಗೊಂಡಿರುವ ಪುಲಿಚಿಂತಲಾ, ಶ್ರೀಶೈಲ ಬಲದಂಡೆ ಮತ್ತು ಎಡದಂಡೆ ಕಾಮಗಾರಿ, ತೆಲುಗುಗಂಗಾ ಹಾಗೂ ಭೀಮ ಏತ ನೀರಾವರಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯ ಸರಕಾರ ತಕರಾರು ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಮೂರ್ತಿ ಪಾಟ್ನಾಯಕ್ ಹಾಗೂ ರೂಮಾಪಾಲ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಈ ಸಂಬಂಧ ನಾಲ್ಕು ವಾರಗಳ ಅವಧಿಯಾಳಗೆ ನ್ಯಾಯಾಲಯಕ್ಕೆ ಹೇಳಿಕೆ ಸಲ್ಲಿಸಲು ಕಾಲಾವಕಾಶ ನೀಡಿ, ಕೇಂದ್ರ ಸರಕಾರ, ಆಂಧ್ರ ಸರಕಾರ ಹಾಗೂ ಕೃಷ್ಣನದಿ ನೀರಿನಲ್ಲಿ ಪಾಲು ಪಡೆವ ಮಹಾರಾಷ್ಟ್ರ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಆಂಧ್ರ ಪ್ರದೇಶ ಸರಕಾರ ಅಕ್ರಮವಾಗಿ ಕೈಗೆತ್ತಿಕೊಂಡಿದ್ದ ಐದು ನೀರಾವರಿ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ 25-4-2000ದಂದು ನೀಡಿದ್ದ ನಿರ್ದೇಶನವನ್ನು ಜಾರಿಗೆ ತರುವಲ್ಲಿ ಕೇಂದ್ರ ಸರಕಾರ ಹಾಗೂ ಆಂಧ್ರ ಸರಕಾರಗಳು ವಿಫಲವಾಗಿವೆ ಎಂದು ಕರ್ನಾಟಕ ಸರಕಾರ ತಕರಾರು ಅರ್ಜಿಯಲ್ಲಿ ಆರೋಪಿಸಿತ್ತು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications