ಬಾಗಲಕೋಟೆ ಸೇತುವೆ ಬಳಿ ರೈಲಿಗೆ ಸಿಕ್ಕಿ 7 ಜನರ ಸಾವು
ಬಾಗಲಕೋಟೆ : ಬಾಗಲಕೋಟೆ ಬಳಿ ಮಲಪ್ರಭಾ ಸೇತುವೆಯ ಮೇಲೆ ನಡೆದುಕೊಂಡು ಹೋಗುತ್ತಿದ್ದ 7 ಮಂದಿ ಸೋಮವಾರ ಬೆಳಗ್ಗೆ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ ಎಂದು ಬಾಗಲಕೋಟೆಯಿಂದ ಬಂದಿರುವ ಪ್ರಾಥಮಿಕ ವರದಿಗಳು ತಿಳಿಸಿವೆ.
ಬಿಜಾಪುರದಿಂದ ಗದಗ್ ಕಡೆಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಹಾಯ್ದ ಪರಿಣಾಮವಾಗಿ ಸೇತುವೆಯನ್ನು ದಾಟುತ್ತಿದ್ದ 7 ಜನರು ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ 6 ಮಂದಿ ಮಹಿಳೆಯರು ಎಂದು ಬಾಗಲಕೋಟೆಯ ಪೊಲೀಸ್ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.
ರೈಲು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ನಾಲ್ವರು ನದಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ತವರನ್ನು ಬಾಗಲಕೋಟೆ ಬಳಿಯ ಕೌಲಪೇಟ ನಿವಾಸಿಗಳಾದ ಸಿದ್ದಮ್ಮ ಸುಂಕದ (30), ಶ್ರೀಶೈಲ ಕವಳ್ಳಿ (70), ಲಕ್ಷ್ಮೀಬಾಯಿ ಹಿರೇಗೌಡರ (45), ಭಾರತಿಮಠ (35), ಸಾವಿತ್ರಿ ದಾವಣಗೆರೆ (18) ಮತ್ತು ಪಾರವ್ವ (30) ಎಂದು ಗುರುತಿಸಲಾಗಿದೆ. ಒಂದು ಮಗುವಿನ ಶವ ಪತ್ತೆಯಾಗಿಲ್ಲ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications