Get Updates
Get notified of breaking news, exclusive insights, and must-see stories!

‘ದೇಶದ ಅತ್ಯುತ್ತಮ ಮುಖ್ಯಮಂತ್ರಿ’ಅಗ್ಗಳಿಕೆಗೆ ಪಾತ್ರರಾದ ಎಸ್ಸೆಂ ಕೃಷ್ಣ

ಬೆಂಗಳೂರು : ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ‘ದೇಶದ ಅತ್ಯುತ್ತಮ ಮುಖ್ಯಮಂತ್ರಿ’ ಎಂದು ಇಂಡಿಯಾ ಟುಡೇ ಮತ್ತು ಆರ್ಗ್‌-ಮಾರ್ಗ್‌ ನ ಜಂಟಿ ಸಮೀಕ್ಷೆ ಫಲಿತಾಂಶ ತಿಳಿಸಿದೆ.

ಅಧಿಕಾರ ಸ್ವೀಕರಿಸಿ ಎರಡು ವರ್ಷ ಪೂರ್ಣವಾಗುವ ಮೊದಲೇ ಕೃಷ್ಣ ಅವರು ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯದಲ್ಲಿ ನಡೆದ ಸಮೀಕ್ಷೆಯಲ್ಲಿ ಶೇ 49ರಷ್ಟು ಮಂದಿ ಕೃಷ್ಣರನ್ನು ಉತ್ತಮ ಮುಖ್ಯಮಂತ್ರಿ ಎಂದಿದ್ದಾರೆ. ಶೇ 36ರಷ್ಟು ಜನ ಮುಖ್ಯಮಂತ್ರಿಗಳ ಸಾಧನೆ ಸಾಮಾನ್ಯ ಎಂದಿದ್ದು , ಶೇ 7ರಷ್ಟು ಜನ ಕಳಪೆ ಸಾಧನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೃಷ್ಣ ಅವರ ಪ್ರಬಲ ಸ್ಪರ್ಧಿ ಎಂದು ಭಾವಿಸಲಾಗಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಸಮೀಕ್ಷೆಯಲ್ಲಿ 8 ನೇ ಸ್ಥಾನದಲ್ಲಿದ್ದಾರೆ. ಬಾಬು ಅವರು ಅವರ ಮಾವ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌.ಟಿ. ರಾಮರಾವ್‌ ಅವರಿಗಿಂತ ಹಿಂದೆ ಬಿದ್ದಿದ್ದಾರೆ.

ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು, ನಾಯಕತ್ವದ ಪೈಪೋಟಿಯಲ್ಲಿ ಉಳಿದವರಿಗಿಂತ ಮುಂದಿದ್ದಾರೆ. ಇಂದಿರಾಗಾಂಧಿ ಭಾರತ ಕಂಡ ಅತ್ಯುತ್ತಮ ಪ್ರಧಾನಿ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದರೆ, ನಂತರದ ಸ್ಥಾನದಲ್ಲಿ ಜವಾಹರ್‌ಲಾಲ್‌ ನೆಹರು, ಅಟಲ್‌ ಬಿಹಾರಿ ವಾಜಪೇಯಿ ಮತ್ತು ಲಾಲ್‌ಬಹದ್ದೂರ್‌ ಶಾಸ್ತ್ರೀ ಇದ್ದಾರೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+